ETV Bharat / city

ಬಜೆಟ್​ 2020: ಉನ್ನತ ಶಿಕ್ಷಣಕ್ಕೆ ಆದ್ಯತೆ ನೀಡಿದ ಸಿಎಂ

ಇಂದು ಸಿಎಂ ಯಡಿಯೂರಪ್ಪನವರು ಏಳನೇ ಬಜೆಟ್​ನ್ನು ಮಂಡಿಸಿದ್ದು, ಉನ್ನತ ಶಿಕ್ಷಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ.

ಉನ್ನತ ಶಿಕ್ಷಣಕ್ಕೆ ಆದ್ಯತೆ ನೀಡಿದ ಸಿಎಂ
CM gave importance to Higher education
author img

By

Published : Mar 5, 2020, 2:21 PM IST

ಬೆಂಗಳೂರು: ಇಂದು ಸಿಎಂ ಯಡಿಯೂರಪ್ಪನವರು ಏಳನೇ ಬಜೆಟ್​ನ್ನು ಮಂಡಿಸಿದ್ದು, ಉನ್ನತ ಶಿಕ್ಷಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ.

ಈ ಬಾರಿಯ ಬಜೆಟ್​ನಲ್ಲಿ ಮುಖ್ಯಮಂತ್ರಿಗಳು ಉನ್ನತ ಶಿಕ್ಷಣಕ್ಕೆ ಒತ್ತು ನೀಡಿದ್ದು, ಬೆಂಗಳೂರಿನಲ್ಲಿರುವ ಐತಿಹಾಸಿಕ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜನ್ನು ಐಐಟಿ ಮಾದರಿಯಲ್ಲಿ ಸ್ವಾಯತ್ತಗೊಳಿಸಿ ಅಭಿವೃದ್ಧಿಪಡಿಸಲು10 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಆಡಳಿತ ವ್ಯವಸ್ಥೆಯನ್ನು ತಂತ್ರಜ್ಞಾನದ ನೆರವಿನಿಂದ ಸಮರ್ಥವಾಗಿ ನಿರ್ವಹಿಸಲು ಒಂದು ಶಾಶ್ವತ ವ್ಯವಸ್ಥೆಯನ್ನು ಒಂದು ಕೋಟಿ ರೂ.ಗಳ ವೆಚ್ಚದಲ್ಲಿ ರೂಪಿಸಲು ನಿರ್ಧರಿಸಿದ್ದಾರೆ.

ರಾಜ್ಯದ ಉನ್ನತ ಶಿಕ್ಷಣದ ನಿವ್ವಳ ನೋಂದಣಿ ಅನುಪಾತವನ್ನು ಹೆಚ್ಚಿಸಲು ಇಂಟರ್ಯಾಕ್ಟೀವ್ ಆನ್​ಲೈನ್ ಕೋರ್ಸ್‍ಗಳನ್ನು ಪ್ರಾರಂಭಿಸಲಾಗುವುದು. ಇದಕ್ಕೆ ಅವಶ್ಯವಿರುವ ಗುಣಾತ್ಮಕ ಇ-ಕಂಟೆಂಟ್ ಅನ್ನು ಒಂದು ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿಸಸಲು ನಿರ್ಧರಿಸಲಾಗಿದೆ.

ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಡಿಯಲ್ಲಿ ತಲಾ ಐದು ಕೋಟಿ ರೂ.ಗಳ ವೆಚ್ಚದಲ್ಲಿ ಜಿಯೋಸ್ಪೆಷಲ್ ತಂತ್ರಜ್ಞಾನ ಕೇಂದ್ರಗಳನ್ನು ಸ್ಥಾಪನೆ.

ಏಷ್ಯಾ ಖಂಡದ ದೇಶಗಳ ಶಿಕ್ಷಣ ಸಚಿವರ ಶೈಕ್ಷಣಿಕ ಸಮಾವೇಶ ಮತ್ತು ಬೃಹತ್ ವಸ್ತು ಪ್ರದರ್ಶನವನ್ನು ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರಿನಲ್ಲಿ ಏರ್ಪಡಿಸಲಾಗುವುದು.

ಇತ್ತೀಚಿನ ತಂತ್ರಜ್ಞಾನವನ್ನು ಸದುಪಯೋಗ ಪಡಿಸಿಕೊಂಡು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ,ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ 19 ಕೋಟಿ ರೂ. ವೆಚ್ಚದಲ್ಲಿ ಟೆಲಿಮೆಡಿಸನ್ ಸೇವೆಯನ್ನು ಹಂತ ಹಂತವಾಗಿ ವಿಸ್ತರಿಸಲು ಉದ್ದೇಶಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.