ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಇಂದು (ಶನಿವಾರ) ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಬೆಳಗ್ಗೆ 11ಕ್ಕೆ ಮಲ್ಲೇಶ್ವರಂನ ಪಿಯುಸಿ ಬೋರ್ಡ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ.
ಎಸ್ಎಸ್ಎಲ್ಸಿ ಫಲಿತಾಂಶದ ರೀತಿಯೇ ವಿದ್ಯಾರ್ಥಿಗಳ ಮೊಬೈಲ್‌ಗೆ ಫಲಿತಾಂಶ ರವಾನೆಯಾಗಲಿದೆ. ವಿದ್ಯಾರ್ಥಿಗಳು ಮಧ್ಯಾಹ್ನ 12ಕ್ಕೆ http://www.karresults.nic.in ವೆಬ್‌ಸೈಟ್ ಮೂಲಕ ಫಲಿತಾಂಶ ವೀಕ್ಷಿಸಬಹುದು. ಈ ಬಾರಿ 6,84,255 ವಿದ್ಯಾರ್ಥಿಗಳು ಪರೀಕ್ಷೆ ನೋಂದಣಿ ಮಾಡಿದ್ದರು. ಈ ಪೈಕಿ ಬಾಲಕರು-3,46,936, ಬಾಲಕಿಯರು-3,37,319 ಇದ್ದಾರೆ.
ಒಟ್ಟಾರೆ ರೆಗ್ಯುಲರ್ ವಿದ್ಯಾರ್ಥಿಗಳು-6,00,519, ಪುನರಾವರ್ತಿತ ವಿದ್ಯಾರ್ಥಿಗಳು-61,808, ಖಾಸಗಿ ವಿದ್ಯಾರ್ಥಿಗಳು-21,928 ಇದ್ದರು. ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಕಲಾ ವಿಭಾಗದಲ್ಲಿ-2,28,167, ವಾಣಿಜ್ಯ ವಿಭಾಗದಲ್ಲಿ-2,45,519 ಹಾಗೂ ವಿಜ್ಞಾನ ವಿಭಾಗದಲ್ಲಿ 2,10,569 ಜನ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆ ಬರೆದಿದ್ದಾರೆ.
ಇದನ್ನೂ ಓದಿ: ನಾಳೆ ಬೆಳಗ್ಗೆ 11ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ