ETV Bharat / city

ರಾಜ್ಯಸಭೆಗೆ ಬಿಜೆಪಿಯಿಂದ ಅಚ್ಚರಿ ಅಭ್ಯರ್ಥಿಗಳ ಆಯ್ಕೆ... ಕತ್ತಿ, ಕೋರೆಗೆ ನಿರಾಸೆ - ಅಶೋಕ್ ಗಸ್ತಿ

ಇಂದು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದು, ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿಯನ್ನು ಅಭ್ಯರ್ಥಿಗಳಾಗಿ ಘೋಷಣೆ ಮಾಡಲಾಗಿದೆ.

Rajya Sabha
ರಾಜ್ಯಸಭೆಗೆ ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿಗಳ ಆಯ್ಕೆ
author img

By

Published : Jun 8, 2020, 1:32 PM IST

ಬೆಂಗಳೂರು: ರಾಜ್ಯ ಬಿಜೆಪಿ ಘಟಕ ಹಾಗೂ ರಾಜ್ಯಸಭಾ ಟಿಕೆಟ್ ಆಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದ್ದು, ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಅಚ್ಚರಿ ಮೂಡಿಸಿದೆ.

Rajya Sabha
ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಪ್ರಕಟಣೆ

ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿಯನ್ನು ರಾಜ್ಯಸಭಾ ಅಭ್ಯರ್ಥಿಗಳಾಗಿ ಬಿಜೆಪಿ ವರಿಷ್ಠರು ಘೋಷಣೆ ಮಾಡಿದ್ದಾರೆ.

Iranna Kadadi
ಈರಣ್ಣ ಕಡಾಡಿ

ರಾಜ್ಯಸಭಾ ಟಿಕೆಟ್ ಆಕಾಂಕ್ಷಿಗಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೇಲೆ ಒತ್ತಡ ಹೇರಿ ರೆಬಲ್​​ ಚಟುವಟಿಕೆ ನಡೆಸಿದ್ದು, ಈ ಬಳಿಕ ರಾಜ್ಯ ಬಿಜೆಪಿ ಕೋರ್ ಕಮಿಟಿಯು ಪ್ರಭಾಕರ್ ಕೋರೆ, ರಮೇಶ್ ಕತ್ತಿ, ಪ್ರಕಾಶ್ ಶೆಟ್ಟಿ ಹೆಸರನ್ನು ಅಂತಿಮಗೊಳಿಸಿ ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಟ್ಟಿತ್ತು. ಇವರ ಜೊತೆ ಮಾ.ನಾಗರಾಜ್ ಹಾಗೂ ನಿರ್ಮಲ್ ಕುಮಾರ್ ಸುರಾನ ಹೆಸರುಗಳೂ ಕೇಳಿ ಬಂದಿದ್ದವು.

Ashok Gasti
ಅಶೋಕ್ ಗಸ್ತಿ

ಆದರೆ, ಇಂದು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದು, ರಾಜ್ಯ ಘಟಕ ಶಿಫಾರಸು ಮಾಡಿದ್ದ ಯಾವುದೇ ಹೆಸರನ್ನು ಪರಿಗಣಿಸದೇ ಹೊಸ ಹೆಸರುಗಳನ್ನು ಪ್ರಕಟಿಸಿದೆ. ಬೆಳಗಾವಿ ವಿಭಾಗ ಪ್ರಭಾರಿಯಾಗಿರುವ ಈರಣ್ಣ ಕಡಾಡಿ ಹಾಗೂ ಬಳ್ಳಾರಿ ವಿಭಾಗ ಪ್ರಭಾರಿಯಾಗಿರುವ ಅಶೋಕ್ ಗಸ್ತಿಯನ್ನು ರಾಜ್ಯಸಭಾ ಅಭ್ಯರ್ಥಿಗಳಾಗಿ ಘೋಷಣೆ ಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.