ಬೆಂಗಳೂರು: ಸಿಎಂ ಬಿಎಸ್ವೈ ನೇತೃತ್ವದ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸಾಧನಾ ಸಮಾವೇಶ ನಡೆಯುತ್ತಿದೆ. ಪದತ್ಯಾಗದ ಗೊಂದಲದ ಮಧ್ಯೆ ಸರ್ಕಾರದ ಸಾಧನೆಗಳ ಬಗ್ಗೆ ಮಾತನಾಡಲು ಸಿಎಂ ಭಾಗಿಯಾಗಿದ್ದಾರೆ.
ಆದರೆ, ಕಾರ್ಯಕ್ರಮಕ್ಕೆ ಸಚಿವ ಸಿ.ಪಿ.ಯೋಗೇಶ್ವರ್, ಸಿಎಂ ರೇಸ್ ಅಲ್ಲಿ ಹೆಸರು ಕೇಳಿಬಂದಿರುವ ಸಚಿವ ಮುರುಗೇಶ್ ನಿರಾಣಿ, ಅರವಿಂದ ಬೆಲ್ಲದ್, ಬಸನಗೌಡ ಯತ್ನಾಳ್, ಸಚಿವ ರಮೇಶ್ ಜಾರಕಿಹೊಳಿ, ಸಚಿವೆ ಶಶಿಕಲಾ ಜೊಲ್ಲೆ, ಬಾಲಚಂದ್ರ ಜಾರಕಿಹೊಳಿ, ಸಿ ಟಿ ರವಿ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.
ಇನ್ನು ಕಾರ್ಯಕ್ರಮದಲ್ಲಿ ಡಿಸಿಎಂಗಳಾದ ಅಶ್ವತ್ಥ್ ನಾರಾಯಣ್, ಗೋವಿಂದ ಕಾರಜೋಳ, ಲಕ್ಷ್ಮಣ್ ಸವದಿ, ಸಚಿವರಾದ ಡಾ.ಕೆ.ಸುಧಾಕರ್, ಬೈರತಿ ಬಸವರಾಜ್, ಗೋಪಾಲಯ್ಯ, ಎಸ್.ಟಿ.ಸೋಮಶೇಖರ್, ಸುರೇಶ್ ಕುಮಾರ್, ಅರವಿಂದ ಲಿಂಬಾವಳಿ, ಮಾಧುಸ್ವಾಮಿ, ವಿ.ಸೋಮಣ್ಣ, ಎಂಟಿಬಿ ನಾಗರಾಜ್, ಬಿ.ಸಿ.ಪಾಟೀಲ್, ಬಸವರಾಜ್ ಬೊಮ್ಮಾಯಿ ಹಾಗೂ ರೇಣುಕಾಚಾರ್ಯ, ಎಸ್. ಆರ್.ವಿಶ್ವನಾಥ್ ಸೇರಿದಂತೆ ಬಿಎಸ್ವೈ ಆಪ್ತ ಬಿಜೆಪಿ ಶಾಸಕರು, ಪರಿಷತ್ ಸದಸ್ಯರು, ಅಧಿಕಾರಿಗಳು ಭಾಗಿಯಾಗಿದ್ದಾರೆ.