ETV Bharat / city

ಬಜೆಟ್​​​ನಲ್ಲಿ ತವರು ಜಿಲ್ಲೆಗೆ ಭರಪೂರ ಕೊಡುಗೆ ನೀಡಿದ ಸಿಎಂ ಬೊಮ್ಮಾಯಿ

Karnataka Budget 2022: ಸಿಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆ ಹಾವೇರಿಗೆ ಬಂಪರ್ ಕಾರ್ಯಕ್ರಮಗಳನ್ನ ನೀಡಿದ್ದಾರೆ. ಹಾವೇರಿ ಜಿಲ್ಲೆಗೆ ಒಟ್ಟು 15 ಕಾರ್ಯಕ್ರಮಗಳ ಘೋಷಣೆ ಮಾಡಿದ್ದಾರೆ.

CM Bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
author img

By

Published : Mar 5, 2022, 7:21 AM IST

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್​​​ನಲ್ಲಿ ತವರು ಜಿಲ್ಲೆ ಹಾವೇರಿಗೆ ಬಂಪರ್ ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. ವಿವಿಧ ಜಿಲ್ಲೆಗಳಿಗೂ ಕೊಡುಗೆಗಳನ್ನು ನೀಡುವುದರ ಜೊತೆಗೆ ತಮ್ಮ ತವರು ಜಿಲ್ಲೆಗೆ 15 ಕಾರ್ಯಕ್ರಮಗಳ ಘೋಷಣೆ ಮಾಡಿ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ.

ತವರು ಜಿಲ್ಲೆಗೆ ಸಿಎಂ ಬಜೆಟ್ ಕೊಡುಗೆ ಏನು?:

  • ಹಿರೇಕೆರೂರಿನಲ್ಲಿ ಗೋವಿನ ಜೋಳ ಸಂಶೋಧನಾ ಕೇಂದ್ರ.
  • ಹಾನಗಲ್​​​​ನಲ್ಲಿ ಮಾವು ಸಂಸ್ಕರಣಾ ಘಟಕ.
  • ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆ.
  • ಕಾಲೇಜುಗಳ ಮೇಲ್ವಿಚಾರಣೆ ಸುಧಾರಣೆಗೆ ಹಾವೇರಿ ಸೇರಿ ಏಳು ಜಿಲ್ಲೆಗಳಲ್ಲಿ ವಿನೂತನ ಮಾದರಿಯ ವಿವಿ ಸ್ಥಾಪನೆ.
  • ಹಾವೇರಿ ಸೇರಿ ನಾಲ್ಕು ಜಿಲ್ಲೆಗಳಲ್ಲಿ 'ಮುಖ್ಯಮಂತ್ರಿ ಆರೋಗ್ಯ ವಾಹಿನಿ' ಹೆಸರಿನ ಸಂಚಾರಿ ಕ್ಲಿನಿಕ್.
  • ಶಿಗ್ಗಾಂವಿ ತಾಲೂಕು ಸಾರ್ವಜನಿಕ ಆಸ್ಪತ್ರೆ 250 ಹಾಸಿಗೆಗಳಿಗೆ ಮೇಲ್ದರ್ಜೆಗೆ.
  • ಸವಣೂರು ತಾಲೂಕಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ.
  • ಚರ್ಮ ಕುಶಲಕರ್ಮಿಗಳಿಗೆ ಹಾವೇರಿಯಲ್ಲಿ ಸಾಮಾನ್ಯ ಸೌಲಭ್ಯ ಸಮುಚ್ಛಯ ಸ್ಥಾಪನೆ.
  • ಶಿಗ್ಗಾಂವಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಏರೋಸ್ಪೇಸ್, ಇಂಜಿನಿಯರಿಂಗ್, ಇಂಡಸ್ಟ್ರಿಯಲ್ ಆಟೋಮೇಷನ್, ಎಲೆಕ್ಟ್ರಾನಿಕ್ ಕ್ಷೇತ್ರಗಳ ತರಬೇತುದಾರರಿಗೆ ತರಬೇತಿ ಕೇಂದ್ರ.
  • ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರುಗಳಿಗೆ ಹೊಸ ರೈಲು ಮಾರ್ಗ ಯೋಜನೆ.
  • ಹಾವೇರಿಯಲ್ಲಿ ಕೈಗಾರಿಕೆ ಸ್ಥಾಪಿಸಲು ಉತ್ತೇಜನ.
  • ರಾಣೆಬೆನ್ನೂರಿನಲ್ಲಿ ನೂತನ‌ ಜವಳಿ ಪಾರ್ಕ್.
  • ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೆ 20 ಕೋಟಿ ರೂ. ನಿಗದಿ
  • ಹಾವೇರಿಯಲ್ಲಿ ಡಾ.ಮಹಾದೇವ ಬಣಕಾರರ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ 2 ಕೋಟಿ ರೂ.
  • ಶಿಗ್ಗಾಂವಿಯಲ್ಲಿ ಬಸ್ ಘಟಕ ಮತ್ತು ಚಾಲನಾ ತರಬೇತಿ ಕೇಂದ್ರಕ್ಕೆ 28 ಕೋಟಿ ರೂ.

ಇದನ್ನೂ ಓದಿ: ಚೊಚ್ಚಲ ಬಜೆಟ್ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಸಮರ್ಥನೆ ಏನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.