ETV Bharat / city

ಮೇಕೆದಾಟು ಯೋಜನೆಗೆ ₹1 ಸಾವಿರ ಕೋಟಿ ಅನುದಾನ: ಸಿಎಂಗೆ ಡಿಕೆಶಿ ಅಭಿನಂದನೆ

ಮೇಕೆದಾಟು ಯೋಜನೆಗಾಗಿ ಬಜೆಟ್​ನಲ್ಲಿ ಸಾವಿರ ಕೋಟಿ ರೂ ಅನುದಾನ ಮೀಸಲಿಡಲಾಗಿದೆ. ಈ ನಿರ್ಧಾರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ವಾಗತಿಸಿದ್ದಾರೆ.

DKS Welcomes 1000 crore for Mekedatu project

author img

By

Published : Mar 4, 2022, 6:24 PM IST

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-23ನೇ ಸಾಲಿನ ಬಜೆಟ್​ನಲ್ಲಿ ನೀರಾವರಿ ಕ್ಷೇತ್ರಕ್ಕೆ ಬಂಪರ್​ ಕೊಡುಗೆ ನೀಡಿದ್ದು, ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿದ್ದಾರೆ. ಪ್ರಮುಖವಾಗಿ ಮೇಕೆದಾಟು ಯೋಜನೆಗೆ ಸಾವಿರ ಕೋಟಿ ರೂ. ಮೀಸಲಿಡಲಾಗಿದೆ.

ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ಬಜೆಟ್‌ನಲ್ಲಿ ಒಂದು ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಿರುವುದು ಸ್ವಾಗತಾರ್ಹ. ನೀರಿನ ವಿಷಯದಲ್ಲಿ ಕರ್ನಾಟಕವನ್ನು ಸ್ವಾವಲಂಬಿಯಾಗಿಸುವ ಈ ನಿರ್ಧಾರಕ್ಕಾಗಿ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.

  • ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ಬಜೆಟ್‌ನಲ್ಲಿ ಒಂದು ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಿರುವುದು ಸ್ವಾಗತಾರ್ಹ. ನೀರಿನ ವಿಷಯದಲ್ಲಿ ಕರ್ನಾಟಕವನ್ನು ಸ್ವಾವಲಂಬಿಯಾಗಿಸುವ ಈ ನಿರ್ಧಾರಕ್ಕಾಗಿ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ. 1/3

    — DK Shivakumar (@DKShivakumar) March 4, 2022 " class="align-text-top noRightClick twitterSection" data=" ">

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಡೆಸಲಾದ ನಮ್ಮ ನೀರು ನಮ್ಮ ಹಕ್ಕು ಪಾದಯಾತ್ರೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬ ಕನ್ನಡಿಗರಿಗೂ ಇದರ ಪ್ರತಿಫಲ ಸಲ್ಲುತ್ತದೆ. ಇದು ನಮ್ಮೆಲ್ಲರ ಗೆಲುವು. ಸಾಮೂಹಿಕ ಹೋರಾಟದಿಂದ ಹಕ್ಕುಗಳನ್ನು ಪಡೆಯಬಹುದು ಎಂಬುದಕ್ಕೆ ಇದೊಂದು ನಿದರ್ಶನ ಎಂದಿದ್ದಾರೆ.

ಆದರೆ, ಕಳೆದ ಸಾಲಿನ ಬಜೆಟ್‌ನಲ್ಲಿ ಬೆಂಗಳೂರು ನಗರಕ್ಕೆ ಘೋಷಿಸಿದ್ದ ₹7,795 ಕೋಟಿ ವೆಚ್ಚದ ಕಾರ್ಯಕ್ರಮವನ್ನು ಸರ್ಕಾರ ಒಂದು ವರ್ಷ ಕಳೆದರೂ ಈಡೇರಿಸಿಲ್ಲ ಎಂಬುದು ಗಮನಾರ್ಹ. ಹಾಗಾಗಿ ಮಹತ್ವಾಕಾಂಕ್ಷೆಯ ಯೋಜನೆಗೆ ಸಾವಿರ ಕೋಟಿ ರೂಪಾಯಿ ಘೋಷಣೆ ಕೇವಲ ಭರವಸೆಯಾಗಿ ಉಳಿಯದೆ ತ್ವರಿತವಾಗಿ ಕಾರ್ಯಗತಗೊಳ್ಳಬೇಕು ಎಂದು ಡಿಕೆಶಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಹೊಸ ಯೋಜನೆಗಳ ಮಹಾಪೂರ: ವಿವಿಧ ಯೋಜನೆಗಳಿಗೆ ಸಿಕ್ಕ ಅನುದಾನದ ಸಂಪೂರ್ಣ ವಿವರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.