ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು 2022ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. ಮಹಿಳೆಯರಿಗಾಗಿ ಈ ಬಾರಿಯ ಬಜೆಟ್ನಲ್ಲಿ ನೀಡಿರುವ ಕೊಡುಗೆಗಳು ಈ ಕೆಳಕಂಡಂತಿವೆ..
- ಆಯ್ದ ಸ್ವ-ಸಹಾಯ ಸಂಘಗಳಿಗೆ ತಲಾ 1.5 ಲಕ್ಷ ರೂ. ನೆರವು ಇದಕ್ಕಾಗಿ 500 ಕೋಟಿ ರೂ. ಅನುದಾನ.
- ಪರಿಶಿಷ್ಟ ಜಾತಿ ಮತ್ತು ಪಂಗಡದ ಗುಂಪುಗಳಿಗೆ ವಿಶೇಷ ಆದ್ಯತೆ. ಇದರಿಂದ 3.9 ಲಕ್ಷ ಮಹಿಳೆಯರಿಗೆ ಅನುಕೂಲ.
- ನೂತನ ಕೆಎಸ್ಆರ್ಪಿ ಮಹಿಳಾ ಘಟಕ ಆರಂಭಿಸುವುದಾಗಿ ಭರವಸೆ
- ಏಕಗವಾಕ್ಷಿ ಸಾಲ ಸೌಲಭ್ಯ ವ್ಯವಸ್ಥೆ: ಮಹಿಳಾ ಸ್ವ-ಸಹಾಯ ಸಂಘಗಳಿಗೆ ವಾಣಿಜ್ಯ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲು ಈ ಯೋಜನೆ ಉಪಯುಕ್ತ.
- ಅಸ್ಮಿತೆ : ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳ ಬ್ರ್ಯಾಂಡಿಂಗ್, ಮೌಲ್ಯವರ್ಧನೆ, ಪ್ಯಾಕಿಂಗ್ ಸೌಲಭ್ಯ ಒದಗಿಸಿ, ಮಾರುಕಟ್ಟೆ ಒದಗಿಸಲು 'ಅಸ್ಮಿತ' ಹೆಸರಿನಡಿ ಎಲ್ಲಾ ಉತ್ಪನ್ನಗಳ ಮಾರಾಟ ಹೋಬಳಿ/ ಜಿಲ್ಲೆ/ ರಾಜ್ಯ ಮಟ್ಟದಲ್ಲಿ ಮಾರಾಟ ಮೇಳ ಆಯೋಜನೆ.
- ಆಶಾ ಕಾರ್ಯಕರ್ತೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ
ಇದನ್ನೂ ಓದಿ: ರಾಜ್ಯ ಬಜೆಟ್-2022: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್