ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮಾರ್ಗಸೂಚಿಯಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್‌ನಲ್ಲಿ ತಿಳಿಸಿದ್ದಾರೆ.
- ಹೋಬಳಿ ಮಟ್ಟದಲ್ಲಿ 'ಮಾದರಿ ಶಾಲೆ'ಗಳಾಗಿ ಮೂಲಭೂತ ಸೌಕರ್ಯವಿರುವ ಶಾಲೆಗಳ ಉನ್ನತೀಕರಣ
- ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ. ಆಯ್ದ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಆದ್ಯತೆ
- ಸರ್ಕಾರಿ ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ ರೂ. ಅನುದಾನ
- 'ನೋಡಿ ಕಲಿ ಮಾಡಿ ತಿಳಿ' ಪರಿಕಲ್ಪನೆಯಡಿ ರಾಜ್ಯದ 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಲ್ಯಾಬ್-ಇನ್-ಎ-ಕಿಟ್ ವಿತರಣೆ
- ರಾಜ್ಯವನ್ನು ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯನ್ನಾಗಿ ಮಾಡಲು 7 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣ: ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ
- ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪಳ ಮತ್ತು ಬಾಗಲಕೋಟೆ ವಿನೂತನ ಮಾದರಿಯ 7 ವಿಶ್ವವಿದ್ಯಾಲಯಗಳ ಸ್ಥಾಪನೆ
- ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ನೀಟ್ ಪರೀಕ್ಷೆಗೆ ತರಬೇತಿ
- ಸರ್ಕಾರಿ ಕೋಟಾದಡಿ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯುವ ಬಡ ವಿದ್ಯಾರ್ಥಿಗಳಿಗೆ ಬ್ಯಾಂಕುಗಳಿಂದ ಶೈಕ್ಷಣಿಕ ಸಾಲ ಒದಗಿಸಲು ನೆರವು
- ಖಾಸಗಿ ವೈದ್ಯಕೀಯ ಕಾಲೇಜುಗಳ ವರ್ಗೀಕರಣ ಹಾಗೂ ಶುಲ್ಕ ನಿಯಂತ್ರಣ ಸಮಿತಿಯ ಮೂಲಕ ಶುಲ್ಕ ನಿಗದಿಪಡಿಸಲು ಕ್ರಮ
ಇದನ್ನೂ ಓದಿ: ಕಾಶಿಯಾತ್ರೆಗೆ 5 ಸಾವಿರ ರೂ ಸಹಾಯಧನ; ಧರ್ಮಸ್ಥಳ, ಕುಕ್ಕೆ, ಕೊಲ್ಲೂರು, ತಿರುಪತಿಗೆ ವಿಶೇಷ ಪ್ಯಾಕೇಜ್ ಟ್ರಿಪ್