ETV Bharat / city

ಆರೋಗ್ಯ ಕ್ಷೇತ್ರಕ್ಕೆ ಬಜೆಟ್​ ಕೊಡುಗೆ ಇಂತಿದೆ..

ಬೆಂಗಳೂರಿನ ಎಲ್ಲ ವಾರ್ಡ್‌ಗಳಲ್ಲಿ ಹಾಗೂ ಪ್ರಮುಖ ನಗರಗಳಲ್ಲಿ ಸಾಂಕ್ರಾಮಿಕವಲ್ಲದ ರೋಗಗಳ ತಪಾಸಣೆಗಾಗಿ 438 'ನಮ್ಮ ಕ್ಲಿನಿಕ್​​'ಗಳ ಸ್ಥಾಪನೆ - ಈ ಬಾರಿಯ ರಾಜ್ಯ ಬಜೆಟ್​ನಲ್ಲಿ ಆರೋಗ್ಯ ಕ್ಷೇತ್ರದ ಮೇಲೆ ಪ್ರಮುಖ ಕೊಡುಗೆಯಾಗಿದೆ.

Karnataka Budget health
Karnataka Budget health
author img

By

Published : Mar 4, 2022, 1:38 PM IST

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತಮ್ಮ ಮೊದಲನೇ ಹಾಗೂ 2022ನೇ ಸಾಲಿನ ರಾಜ್ಯ ಬಜೆಟ್​ ಅನ್ನು ಮಂಡನೆ ಮಾಡುತ್ತಿದ್ದಾರೆ. ಕೋವಿಡ್​ ಮೂರನೇ ಅಲೆಯಿಂದ ಚೇತರಿಸಿಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರ ಬಹುಮುಖ್ಯವಾಗಿದೆ.

'ಎಲ್ಲರಿಗೂ ಆರೋಗ್ಯ, ಎಲ್ಲೆಡೆ ಆರೋಗ್ಯ' ಎಂಬ ಧ್ಯೇಯದೊಂದಿಗೆ ಆರೋಗ್ಯ ಕ್ಷೇತ್ರಕ್ಕೆ ನೀಡಲಾಗುತ್ತಿರುವ ಕೊಡುಗೆಗಳನ್ನು ಸಿಎಂ ಬೊಮ್ಮಾಯಿ ವಿವರಿಸಿದರು. ಈ ಬಾರಿಯ ಬಜೆಟ್​ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಏನೆಲ್ಲಾ ಕೊಡುಗೆಗನ್ನು ನೀಡಲಾಗಿದೆ ಎಂಬುದು ಈ ಕೆಳಕಂಡಂತಿದೆ.

  1. ಬೆಂಗಳೂರಿನ ಎಲ್ಲ ವಾರ್ಡ್‌ಗಳಲ್ಲಿ ಹಾಗೂ ಪ್ರಮುಖ ನಗರಗಳಲ್ಲಿ ಸಾಂಕ್ರಾಮಿಕವಲ್ಲದ ರೋಗಗಳ ತಪಾಸಣೆಗಾಗಿ 438 'ನಮ್ಮ ಕ್ಲಿನಿಕ್​​'ಗಳ ಸ್ಥಾಪನೆ
  2. 300 ಮಹಿಳಾ ಸ್ವಾಸ್ಥ್ಯ ಕೇಂದ್ರಗಳ ಸ್ಥಾಪನೆ
  3. ಬಡ-ಹಿರಿಯ ನಾಗರಿಕರಿಗೆ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ಸೌಲಭ್ಯ
  4. ಏಳು ತಾಲೂಕು ಆಸ್ಪತ್ರೆಗಳನ್ನು 100 ಹಾಸಿಗೆಗಳ ಆಸ್ಪತ್ರೆಗಳಾಗಿ ಮೇಲ್ದರ್ಜೆಗೆ ಏರಿಕೆ
  5. ತುಮಕೂರಿನಲ್ಲಿ 20 ಕೋಟಿ ರೂಪಾಯಿ ವೆಚ್ಚದಲ್ಲಿ ಟ್ರಾಮಾ ಕೇರ್ ಕೇಂದ್ರ
  6. ಬೆಳಗಾವಿಯಲ್ಲಿ 50 ಕೋಟಿ ರೂಪಾಯಿ ವೆಚ್ಚದಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ
  7. ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ

ಇದನ್ನೂ ಓದಿ: ವಿಧಾನಸೌಧದ ಮೇಲೆ ಹಾರಿದ ಜೆಟ್: ಆಗಸದಲ್ಲಿ ಮೊದಲ ಬಾರಿಗೆ ಬಜೆಟ್ ಪ್ರಚಾರ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.