ETV Bharat / city

ಸದ್ದಿಲ್ಲದೆ ಸ್ಥಗಿತಗೊಂಡ ಸಂಪುಟ ವಿಸ್ತರಣೆ ಕಸರತ್ತು; ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಭ್ರಮನಿರಸನ

ಇನ್ನೇನು ಒಂದೆರಡು ದಿನಗಳಲ್ಲಿ ಮಂತ್ರಿಮಂಡಲ ವಿಸ್ತರಣೆ ಆಗಿಯೇ ಬಿಡುತ್ತದೆ, ಮಂತ್ರಿಮಂಡಲ ವಿಸ್ತರಣೆಗೆ ಯಾವುದೇ ಅಡ್ಡಿ ಆತಂಕವಿಲ್ಲ ಎಂದು‌ ಭಾವಿಸಿದ್ದ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿರುವುದು ಭ್ರಮನಿರಸನ ಉಂಟುಮಾಡಿದೆ.

Bommai
Bommai
author img

By

Published : May 19, 2022, 6:45 AM IST

ಬೆಂಗಳೂರು: ಬಿಜೆಪಿ ಹೈಕಮಾಂಡ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗು ರಾಜ್ಯ ಬಿಜೆಪಿ ನಾಯಕರು ಅಂದುಕೊಂಡಂತೆ ನಡೆದಿದ್ದರೆ ಇಷ್ಟೊತ್ತಿಗೆ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌ರಚನೆ ನಡೆದು ಹೊಸ ಸಚಿವರು ಅಧಿಕಾರ ಸ್ವೀಕರಿಸುತ್ತಿದ್ದರು. ಆದರೆ, ವಿಧಾನ ಪರಿಷತ್ ಮತ್ತು ರಾಜ್ಯಸಭೆಗಳ ಚುನಾವಣೆ ಸದ್ದಿಲ್ಲದೆ ಸಂಪುಟ ವಿಸ್ತರಣೆ ಕಸರತ್ತನ್ನು ಸ್ಥಗಿತಗೊಳಿಸಿದೆ.

ಇನ್ನೇನು ಒಂದೆರಡು ದಿನಗಳಲ್ಲಿ ಮಂತ್ರಿಮಂಡಲ ವಿಸ್ತರಣೆ ಆಗಿಯೇ ಬಿಡುತ್ತದೆ, ಬಿಜೆಪಿ ಹೈಕಮಾಂಡ್ ಅಮಿತ್ ಶಾ ಬೆಂಗಳೂರಿಗೆ ಬಂದು ಹೋಗಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಕೂಡಾ ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡಿ ಸಮಾಲೋಚಿಸಿದ್ದಾರೆ. ವಿದೇಶ ಪ್ರವಾಸದಿಂದ ಪ್ರಧಾನಿ ಮೋದಿ ವಾಪಸ್​ ಬಂದಿದ್ದಾರೆ. ಹೀಗಾಗಿ ಮಂತ್ರಿಮಂಡಲ ವಿಸ್ತರಣೆಗೆ ಯಾವುದೇ ಅಡ್ಡಿ ಇಲ್ಲ ಎಂದು‌ ಭಾವಿಸಿದ್ದ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿರುವುದು ಭ್ರಮನಿರಸನ ಉಂಟುಮಾಡಿದೆ.

ಹೈಕಮಾಂಡ್ ವಲಯದಲ್ಲಿ ಮತ್ತು ರಾಜ್ಯ ಬಿಜೆಪಿಯಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಪಟ್ಟ ಯಾವುದೇ ಚಟುವಟಿಕೆಗಳು ಸದ್ಯಕ್ಕೆ ಕಾಣುತ್ತಿಲ್ಲ. ಮೇಲ್ಮನೆ ಚುನಾವಣೆ ದಿನಾಂಕ ಪ್ರಕಟವಾಗಿರುವುದು ಮಂತ್ರಿಮಂಡಲ ವಿಸ್ತರಣೆಯನ್ನು ಸದ್ಯಕ್ಕೆ ಮೊಟಕುಗೊಳಿಸಿ ಮುಂದಿನ ತಿಂಗಳಿಗೆ ಮುಂದೂಡಿದಂತಿದೆ.

ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಜೂನ್ 3ರಂದು ನಡೆಯುವ ಚುನಾವಣೆ, ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 10ರಂದು ನಡೆಯುವ ಚುನಾವಣೆ ಹಾಗು ವಿಧಾನ ಪರಿಷತ್ತಿನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 13 ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಯ ಕಾರಣಕ್ಕೆ ಅನಿವಾರ್ಯವಾಗಿ ‌ಸಂಪುಟ‌ ವಿಸ್ತರಣೆ ಪ್ರಕ್ರಿಯೆ ಮುಂದೂಡಲಾಗಿರಬಹುದೆಂದು ಬಿಜೆಪಿಯಲ್ಲಿ ವಿಶ್ಲೇಷಿಸಲಾಗುತ್ತಿದೆ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತ್ರ ಇತ್ತೀಚೆಗೆ ದೆಹಲಿಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಯಾವಾಗ ಏನು ಬೇಕಾದರೂ ಆಗಬಹುದು ಎಂದು ಮಾರ್ಮಿಕವಾಗಿ ಹೇಳಿರುವುದು ಹಲವರಲ್ಲಿ ನಿರೀಕ್ಷೆ ಮತ್ತು‌ ಆತಂಕ ಉಂಟುಮಾಡಿದೆ.

ಇನ್ನೂ ಒಂದು ತಿಂಗಳು ಡೌಟ್: ಸದ್ಯದ ಚುನಾವಣಾ ಪರಿಸ್ಥಿತಿಯನ್ನು ಗಮನಿಸಿದರೆ ಮಂತ್ರಿಮಂಡಲ ವಿಸ್ತರಣೆ ನಡೆಯುವುದು ಅನುಮಾನ ಎನ್ನಲಾಗುತ್ತದೆ. ಚುನಾವಣೆ ನಡೆದು ಫಲಿತಾಂಶ ಪ್ರಕಟವಾಗಿ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲು ಜೂನ್ 15 ರವರೆಗೆ ಸಮಯಾವಕಾಶ ಬೇಕು. ಚುನಾವಣೆ ಕಾರಣದಿಂದಲೇ ಸಂಪುಟ ವಿಸ್ತರಣೆ ಮುಂದೂಡಲ್ಪಟ್ಟಿದ್ದರೆ ಇನ್ನೂ ಒಂದು ತಿಂಗಳು ಸಂಪುಟ ವಿಸ್ತರಣೆ ಸರ್ಕಸ್​ಗೆ ಕಡಿವಾಣ ಬೀಳಲಿದೆ.

ಬಿಜೆಪಿಗೆ ಅಡ್ಡ ಮತದಾನದ ಆತಂಕ: ರಾಜ್ಯಸಭೆ, ವಿಧಾನ ಪರಿಷತ್ ಚುನಾವಣೆ ‌ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನರ್‌ರಚನೆ ‌ಮಾಡಿದರೆ ಅಸಮಾಧಾನಗೊಂಡ ಬಿಜೆಪಿ ಶಾಸಕರು ಚುನಾವಣೆಯಲ್ಲಿ ಅಡ್ಡ ಮತದಾನ ಮಾಡುವ ಸಾಧ್ಯತೆ ಇದ್ದು, ಪಕ್ಷದ ಅಭ್ಯರ್ಥಿಗಳು ಪರಾಭವಗೊಂಡು ಮುಜುಗರ ಎದುರಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಚುನಾವಣೆ ಕಾರಣಕ್ಕಾಗಿಯೇ ಮಂತ್ರಿಮಂಡಲ ವಿಸ್ತರಣೆಗೆ ಹೈಕಮಾಂಡ್ ಹಸಿರು ನಿಶಾನೆ ನೀಡುತ್ತಿಲ್ಲವೆಂದು ಹೇಳಲಾಗಿದೆ.

ಸಿಎಂ ದಾವೂಸ್ ಪ್ರವಾಸ: ಸಚಿವ ಸಂಪುಟ ವಿಸ್ತರಣೆ ಜಿಜ್ಞಾಸೆಯ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಿನ ವಾರ ದಾವೂಸ್​ನಲ್ಲಿ ನಡೆಯುವ ವಿಶ್ವ ಆರ್ಥಿಕ ಒಕ್ಕೂಟದ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾರೆ. ಈ ಬೆಳವಣಿಗೆಯನ್ನು ಗಮನಿಸಿದರೆ ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕೆ ಇಲ್ಲವೆನ್ನುವ ಸ್ಪಷ್ಟ ಸಂದೇಶ ನೀಡುತ್ತದೆ.

ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿಯೇ ಮುಖ್ಯಮಂತ್ರಿ ಬೊಮ್ಮಾಯಿ ಲಂಡನ್ ಪ್ರವಾಸ ರದ್ದುಪಡಿಸಿದ್ದರು. ಲಂಡನ್​ನಲ್ಲಿ ಅವರು ವಿಶ್ವಗುರು ಬಸವಣ್ಣನವರ ಪ್ರತಿಮೆ ಅನಾವರಣ ಮಾಡುವ ಕಾರ್ಯಕ್ರಮವಿತ್ತು.‌ ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳ ಕಾರಣ ಈ ಪ್ರವಾಸ ರದ್ದುಪಡಿಸಿದ್ದರು. ಆದರೆ ಈಗ ಸಿಎಂ ಬರುವ ವಾರ ದಾವೂಸ್ ಟೂರ್ ಹೋಗುತ್ತಿದ್ದು, ಸಂಪುಟ ವಿಸ್ತರಣೆ ಮುಂದೂಡಲ್ಪಟ್ಟಿರುವ ಮುನ್ಸೂಚನೆ ಎಂದೇ ಹೇಳಲಾಗುತ್ತಿದೆ.

ಇದನ್ನೂ ಓದಿ: 90ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ದೇವೇಗೌಡ..ಹಿರಿಯ ಮುತ್ಸದ್ಧಿಯ ರಾಜಕೀಯ ಹೆಜ್ಜೆಗುರುತುಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.