ETV Bharat / city

CET ಫಲಿತಾಂಶ ಘೋಷಣೆ ದಿನಾಂಕ ಪ್ರಕಟಿಸಿದ ಸಚಿವ ಅಶ್ವತ್ಥ ನಾರಾಯಣ - ಕರ್ನಾಟಕ ಸಿಇಟಿ ಫಲಿತಾಂಶ 2022

ಜುಲೈ 30 ರಂದು CET ಪರೀಕ್ಷೆಯ ಫಲಿತಾಂಶ ಪ್ರಕಟ ದಿನಾಂಕ ನಿಗದಿಯಾಗಿದೆ. ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾತರರಾಗಿದ್ದಾರೆ.

ಸಿಇಟಿ ಫಲಿತಾಂಶ
ಸಿಇಟಿ ಫಲಿತಾಂಶ
author img

By

Published : Jul 25, 2022, 3:33 PM IST

ಬೆಂಗಳೂರು: ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಸಾಮಾನ್ಯ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶ ಪರೀಕ್ಷೆಯ (CET) ಫಲಿತಾಂಶವನ್ನು ಇದೇ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ ನಡೆಸಲಾಗಿದ್ದು, ಜುಲೈ 30 ರಂದು ಫಲಿತಾಂಶ ಹೊರಬರಲಿದೆ ಎಂದು ಮಾಹಿತಿ ನೀಡಿದರು. ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್​​ಸಿ ಮತ್ತು ಐಸಿಎಸ್ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ಕೊಡಲಾಗಿತ್ತು.

ಈಗ ಅವರ ಫಲಿತಾಂಶ ಬಂದಿದ್ದು, ಸಿಇಟಿ ಬರೆದಿದ್ದ ಈ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್​​ನಲ್ಲಿ ತಮ್ಮ ಅಂಕಗಳನ್ನು ನಾಳೆ (ಜು.26) ಸಂಜೆಯೊಳಗೆ ಅಪ್ಲೋಡ್ ಮಾಡಬೇಕು ಎಂದು ಹೇಳಿದ್ದಾರೆ.

ಜೂ.16 ಮತ್ತು 17 ರಂದು ಸಿಇಟಿ ಹಾಗೂ 18 ರಂದು ಹೊರನಾಡು ಹಾಗೂ ಗಡಿಭಾಗದ ಕನ್ನಡಿಗರಿಗಾಗಿ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಯ ಮೊದಲ ದಿನ 1,75,305 ವಿದ್ಯಾರ್ಥಿಗಳು ಜೀವಶಾಸ್ತ್ರ ಮತ್ತು 20,80,32 ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದರು. ನೋಂದಣಿ ಮಾಡಿಕೊಂಡಿರುವ ಒಟ್ಟು 2,16,559 ವಿದ್ಯಾರ್ಥಿಗಳಿಗೆ ಹೋಲಿಸಿದರೆ ಕ್ರಮವಾಗಿ ಶೇ. 80.95 & 96.06ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಎರಡನೇ ದಿನ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳು ನಡೆದಿದ್ದವು.

(ಇದನ್ನೂ ಓದಿ: ಅಂಧತ್ವ ಮೆಟ್ಟಿ ನಿಂತ ಬಾಲೆ.. CBSE 12ನೇ ತರಗತಿಯಲ್ಲಿ 496 ಅಂಕಗಳಿಸಿ ದೇಶಕ್ಕೆ ಮೊದಲ ಸ್ಥಾನ)

ETV Bharat Logo

Copyright © 2025 Ushodaya Enterprises Pvt. Ltd., All Rights Reserved.