ಬೆಂಗಳೂರು: ರಾಜ್ಯದ ಹಾಗೂ ದೇಶದ ಕಲಾವಿದರುಗಳಿಗೆ ಸೂಕ್ತ ವೇದಿಕೆ ಒದಗಿಸಿ ಪ್ರೋತ್ಸಾಹ ನೀಡುವಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ ಯಾವಾಗಲೂ ಮುಂದಿರುತ್ತದೆ ಎಂದು ನಟಿ ಅಮಿತಾ ಸದಾಶಿವ ಹೇಳಿದರು. ಶುಕ್ರವಾರ ಬೆಂಗಳೂರಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಆಯೋಜಿಸಲಾಗಿರುವ "ಬೆಂಗಳೂರು ಉತ್ಸವ" ಕರಕುಶಲ ವಸ್ತುಗಳ ಮಾರಾಟ ಮತ್ತು ಪ್ರದರ್ಶನಕ್ಕೆ ನಟಿ ಅಮಿತಾ ಸದಾಶಿವ ಚಾಲನೆ ನೀಡಿ ಮಾತನಾಡಿದರು.
ಕರಕುಶಲ ಮತ್ತು ಕಲಾಕೃತಿಗಳು ಎಂದರೆ ನೆನಪಾಗುವುದು ನಮಗೆ ಕರ್ನಾಟಕ ಚಿತ್ರಕಲಾ ಪರಿಷತ್. ಸಣ್ಣ ವಯಸ್ಸಿನಿಂದಲೂ ನಾನು ಈ ಚಿತ್ರಕಲಾ ಪರಿಷತ್ನ ಆವರಣದಲ್ಲಿ ಕಲಾಕೃತಿಗಳನ್ನು ನೋಡಿ ಆನಂದಿಸಿದ್ದೇನೆ. ಚಿತ್ರಕಲಾ ಪರಿಷತ್ ದೇಶಕ್ಕೆ ಪ್ರಮುಖ ಕಲಾವಿದರುಗಳನ್ನು ನೀಡಿದ ಸಂಸ್ಥೆ. ಹಾಗೆಯೇ, ಕಲಾವಿದರುಗಳಿಗೆ ಸೂಕ್ತ ವೇದಿಕೆಯನ್ನು ಒದಗಿಸಿ ಪ್ರೋತ್ಸಾಹ ನೀಡುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ: ರಫ್ತು ಸನ್ನದ್ಧತೆ ಶ್ರೇಯಾಂಕ ಬಿಡುಗಡೆ: ಕರ್ನಾಟಕಕ್ಕೆ 3ನೇ ಸ್ಥಾನ
ಮೇಳದ ಆಯೋಜಕರಾದ ಅಫ್ತಾಬ್ ಮಾತನಾಡಿ, ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಬೆಳಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಆಯೋಜಿಸಲಾಗಿದ್ದು, ಪ್ರವೇಶ ಉಚಿತವಾಗಿದೆ. 80ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲ ಭಾಗಗಳಿಂದ ಆಗಮಿಸಿರುವ ಕಲಾವಿದರು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ.
ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್ ಲೂಮ್ ಸ್ಯಾರಿ ಸೆಲೆಕ್ಟ್ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ ಎಂದರು.