ಬೆಂಗಳೂರು: ರಾಜ್ಯದಲ್ಲಿಂದು 4,234 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, 18 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.
ಇಂದು 1,599 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 30,865 ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 9,57,769 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 10,01,238 ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 12,585 ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 265 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಲ್ಲಿ 2,906 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದ್ದು, 11 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮೃತಪಡುತ್ತಿರುವವರ ಪ್ರಮಾಣ ಶೇ.0.42 ರಷ್ಟಿದ್ದು, ಸೋಂಕಿತರ ಪ್ರಮಾಣ ಶೇ.3.65ಗೆ ಹೆಚ್ಚಿದೆ. ಈವರೆಗೆ 3,85,0472 ಮಂದಿ ಲಸಿಕೆ ಪಡೆದಿದ್ದಾರೆ.
ಇದನ್ನೂ ಓದಿ: ಅಬ್ಬಾ..! ಕೆಜಿಗೆ 82 ಸಾವಿರ ರೂ.! ಬಿಹಾರದಲ್ಲಿ ಬೆಳೆಯುವ ಈ ವೆಜಿಟೆಬಲ್ ಯಾವುದು?