ಬೆಂಗಳೂರು: ರಾಜ್ಯದಲ್ಲಿಂದು 41,779 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, 373 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 35879 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈವರೆಗೆ 15,10,557 ಮಂದಿ ಚೇತರಿಸಿಕೊಂಡಿದ್ದರೆ, ರಾಜ್ಯದಲ್ಲಿ 5,98,605 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 21,30,267 ಕ್ಕೆ ಏರಿಕೆಯಾಗಿದ್ದು, ಈವರೆಗೆ 21,085 ಜನ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಸೋಂಕಿತರ ಪ್ರಕರಣಗಳ ಶೇಕಡವಾರು 32.86 ರಷ್ಟು ಇದ್ದು, ಸಾವಿನ ಶೇಕಡವಾರು ಪ್ರಮಾಣ 0.89 ರಷ್ಟು ಇದೆ. ಕೋವಿಡ್ಗೆ 373 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 21,085 ಕ್ಕೆ ಏರಿದೆ.