ETV Bharat / city

Karnataka Covid: ರಾಜ್ಯದಲ್ಲಿಂದು 295 ಮಂದಿಗೆ ಕೋವಿಡ್, 5 ಸೋಂಕಿತರ ಸಾವು - ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳು

Karnataka Covid: ಕರ್ನಾಟಕದಲ್ಲಿ ಇಂದು 295 ಜನರಿಗೆ ಕೋವಿಡ್ ಕಂಡು ಬಂದಿದ್ದು, ಐವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Karnataka Covid
Karnataka Covid
author img

By

Published : Dec 21, 2021, 8:49 PM IST

ಬೆಂಗಳೂರು: ರಾಜ್ಯದಲ್ಲಿಂದು 75,639 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 295 ಮಂದಿಗೆ ಸೋಂಕು ದೃಢಪಟ್ಟಿದೆ‌. ಈ ಮೂಲಕ ಸೋಂಕಿತರ ಸಂಖ್ಯೆ 30,02,944 ಕ್ಕೆ ಏರಿಕೆ ಆಗಿದೆ‌. ಇನ್ನು 290 ಮಂದಿ ಗುಣಮುಖರಾಗಿದ್ದು, ಈವರೆಗೆ 29,57,546 ಜನ ಡಿಸ್ಚಾರ್ಜ್ ಆಗಿದ್ದಾರೆ.

ಇಂದು ಐವರು ಸೋಂಕಿತರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 38,295 ಕ್ಕೆ ಏರಿದೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 7074ಕ್ಕೆ ಏರಿಕೆ ಕಂಡಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ‌.0.39 ರಷ್ಟು ಇದ್ದು, ಸಾವಿನ ಪ್ರಮಾಣ ಶೇ.1.69 ರಷ್ಟು ಇದೆ. ವಿಮಾನ ನಿಲ್ದಾಣದಿಂದ 1597 ಪ್ರಯಾಣಿಕರು ತಪಾಸಣೆಗೊಳಪಟ್ಟಿದ್ದು, ಹೈರಿಸ್ಕ್ ದೇಶದಿಂದ 789 ಜನ ಆಗಮಿಸಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿಂದು 204 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 12,60,481 ಕ್ಕೆ ಏರಿದೆ. 171 ಜನರು ಡಿಸ್ಚಾರ್ಜ್ ಆಗಿದ್ದು, 12,38,411 ಜನರು ಗುಣಮುಖರಾಗಿದ್ದಾರೆ. ಇಂದು ನಗರದಲ್ಲಿ ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ, ಸಾವಿನ ಸಂಖ್ಯೆ 16,378 ರಷ್ಟಿದ್ದು, ಸದ್ಯ ಸಕ್ರಿಯ ಪ್ರಕರಣಗಳು 5,691 ರಷ್ಟಿವೆ.

ರೂಪಾಂತರಿ ಅಪಡೇಟ್ಸ್:
ಅಲ್ಫಾ - 155
ಬೇಟಾ - 08
ಡೆಲ್ಟಾ - 2569
ಡೆಲ್ಟಾ ಸಬ್ ಲೈನ್ ಏಜ್ - 949
ಕಪ್ಪಾ - 160
ಈಟಾ - 01
ಒಮಿಕ್ರಾನ್ - 19

(ಇದನ್ನೂ ಓದಿ: South Africa vs India: ಕೋಚ್​ ರಾಹುಲ್ ದ್ರಾವಿಡ್ ದಾಖಲೆ ಮೇಲೆ ವಿರಾಟ್​ ಕೊಹ್ಲಿ ಕಣ್ಣು)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.