ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಮತ್ತೆ ತನ್ನ ಆರ್ಭಟ ಹೆಚ್ಚಿಸಿದೆ. ಇಂದು ಒಂದೇ ದಿನ 1798 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 9,68,487 ಕ್ಕೆ ಏರಿಕೆ ಆಗಿದೆ.
ಇಂದು 7 ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,432ಕ್ಕೆ ಏರಿದೆ. 1030 ಮಂದಿ ಗುಣಮುಖರಾಗಿದ್ದು, 9,43,208 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇತ್ತ ಮತ್ತೆ ಸಕ್ರಿಯ ಪ್ರಕರಣಗಳು 12,828 ಇದ್ದು, 134 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರ ಪ್ರಕರಣಗಳ ಶೇ.1.91ರಷ್ಟು ಇದ್ದರೆ, ಮೃತರ ಪ್ರಮಾಣ ಶೇ. 0.38 ರಷ್ಟು ಇದೆ.
ಯುಕೆಯಿಂದ ಈವರೆಗೆ ಬಂದಿದ್ದ ಪ್ರಯಾಣಿಕರಲ್ಲಿ 64 ಜನರಿಗೆ ಪಾಸಿಟಿವ್ ಬಂದಿದ್ದು, ಈ ಸೋಂಕಿತರ ಸಂಪರ್ಕದಲ್ಲಿದ್ದ 26 ಮಂದಿಗೂ ಪಾಸಿಟಿವ್ ದೃಢಪಟ್ಟಿದೆ. 29 ಜನರಿಗೆ ರೂಪಾಂತರ ಕೊರೊನಾ ಹರಡಿದೆ. ಇತ್ತ, ದಕ್ಷಿಣ ಆಫ್ರಿಕಾದ ಸೋಂಕು ಮೂವರಲ್ಲಿ ಕಾಣಿಸಿಕೊಂಡಿದ್ದು, ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನ ಮುಂದುವರೆಸಲಾಗಿದೆ.