ಬೆಂಗಳೂರು: ರಾಜ್ಯದಲ್ಲಿಂದು ಕೂಡ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ. 22,758 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 24,72,973ಕ್ಕೆ ಏರಿಕೆ ಆಗಿದೆ.
38,224 ಮಂದಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ 20,22,172 ಜನರು ಗುಣಮುಖರಾಗಿದ್ದಾರೆ. ಸದ್ಯ 4,24,381 ರಷ್ಟು ಸಕ್ರಿಯ ಪ್ರಕರಣಗಳಿವೆ. ಕೋವಿಡ್ನಿಂದ ಇಂದು 588 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 26,399ಕ್ಕೆ ಏರಿದೆ.
ರಾಜ್ಯದಲ್ಲಿ ಸೋಂಕಿತರ ಪ್ರಕರಣಗಳ ಶೇಕಡವಾರು 21,13 ರಷ್ಟು ಇದ್ದು, ಸಾವಿನ ಶೇಕಡವಾರು ಪ್ರಮಾಣ 2.58 ರಷ್ಟು ಇದೆ. ಯುಕೆಯಿಂದ ಇಂದು 115 ಅಂತಾರಾಷ್ಟ್ರೀಯ ಪ್ರಯಾಣಿಕರು ಆಗಮಿಸಿದ್ದಾರೆ. ಯುಕೆಯಿಂದ ಆಗಮಿಸಿದವರಲ್ಲಿ ಇಲ್ಲಿ ತನಕ 109 ಜನರಿಗೆ ರೂಪಾಂತರಿ ಸೋಂಕು ಕಾಣಿಸಿಕೊಂಡಿದೆ.