ಬೆಂಗಳೂರು: ರಾಜ್ಯದಲ್ಲಿಂದು 1,18,227 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 373 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,99,471 ಕ್ಕೆ ಏರಿಕೆ ಆಗಿದೆ. 292 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 29,53,857 ಡಿಸ್ಚಾರ್ಜ್ ಆಗಿದ್ದಾರೆ.
ಸೋಂಕಿಗೆ ಇಂದು ನಾಲ್ವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 38,253 ಕ್ಕೆ ಏರಿದೆ. ಸದ್ಯ 7332 ಕ್ಕೆ ಸಕ್ರಿಯ ಪ್ರಕರಣಗಳು ಇವೆ. ಸೋಂಕಿತರ ಪ್ರಮಾಣ ಶೇ 0.31 ರಷ್ಟಿದ್ದು, ಸಾವಿನ ಪ್ರಮಾಣ ಶೇ.1.07 ರಷ್ಟು ಇದೆ.
ರಾಜಧಾನಿ ಬೆಂಗಳೂರಲ್ಲಿಂದು 211 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 12,58,330 ಕ್ಕೆ ಏರಿದೆ. 133 ಜನರು ಡಿಸ್ಚಾರ್ಜ್ ಆಗಿದ್ದು, ಈವರೆಗೆ ಒಟ್ಟು 12,36,462 ಜನ ಗುಣಮುಖರಾಗಿದ್ದಾರೆ. ನಾಲ್ವರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 16,358 ಕ್ಕೆ ಏರಿದೆ. ಸದ್ಯ ಸಕ್ರಿಯ ಪ್ರಕರಣಗಳು 5,509 ಇವೆ. ಇಂದು ರಾಜಧಾನಿವೊಂದರಲ್ಲಷ್ಟೇ ಸೋಂಕಿತರು ಸಾವನ್ನಪಿರುವ ವರದಿಯಾಗಿದ್ದು, ಉಳಿದಂತೆ ಬೇರೆ ಜಿಲ್ಲೆಗಳಲ್ಲಿ ಶೂನ್ಯ ವರದಿಯಾಗಿದೆ.
(ಇದನ್ನೂ ಓದಿ: 60 ವರ್ಷದ ವೃದ್ಧನನ್ನ ಮದುವೆಯಾಗುವುದಾಗಿ ನಂಬಿಸಿ ತಾಳಿ, ಕಾಲುಂಗುರ, ರೇಷ್ಮೆ ಸೀರೆ ಕದ್ದು ಮಹಿಳೆ ಪರಾರಿ)
ರೂಪಾಂತರಿ ಅಪ್ಡೇಟ್ಸ್:
ಅಲ್ಪಾ - 155
ಬೀಟಾ -08
ಡೆಲ್ಟಾ - 2095
ಡೆಲ್ಟಾ ಸಬ್ ಲೈನ್ ಏಜ್ - 558
ಕಪ್ಪಾ -160
ಈಟಾ -01
ಒಮಿಕ್ರಾನ್ - 02
-
ಇಂದಿನ 09/12/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/FPCiSyQIND@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/oaWsbJJhma
— K'taka Health Dept (@DHFWKA) December 9, 2021 " class="align-text-top noRightClick twitterSection" data="
">ಇಂದಿನ 09/12/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/FPCiSyQIND@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/oaWsbJJhma
— K'taka Health Dept (@DHFWKA) December 9, 2021ಇಂದಿನ 09/12/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/FPCiSyQIND@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/oaWsbJJhma
— K'taka Health Dept (@DHFWKA) December 9, 2021