ಬೆಂಗಳೂರು: ರಾಜ್ಯದಲ್ಲಿಂದು 1,870 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,76,425ಕ್ಕೆ ಏರಿಕೆ ಆಗಿದೆ. ಕೊರೊನಾಗೆ 17 ಸೋಂಕಿತರು ಮೃತರಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 11,695ಕ್ಕೆ ಏರಿಕೆಯಾಗಿದೆ.
19 ಸೋಂಕಿತರು ಅನ್ಯ ಕಾರಣಕ್ಕೆ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಶೇಕಡಾ 1.58ರಷ್ಟು ಹಾಗೂ ಸಾವಿನ ಪ್ರಮಾಣ ಶೇಕಡಾ 0.91ರಷ್ಟಿದೆ. ಕೊರೊನಾದಿಂದ 1,949 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 8,40,099 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 418 ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಇದ್ದು, ರಾಜ್ಯದಲ್ಲಿ ಸದ್ಯ 24,612 ಸಕ್ರಿಯ ಪ್ರಕರಣಗಳಿವೆ.
ಕಳೆದ 7 ದಿನಗಳಲ್ಲಿ 38,089 ಜನರು ಹೋಂ ಕ್ವಾರಂಟೈನ್ನಲ್ಲಿದ್ದಾರೆ. ಇನ್ನು ಸೋಂಕಿತರ ಸಂಪರ್ಕದಲ್ಲಿ ಪ್ರಾಥಮಿಕ ಸಂಪರ್ಕದಲ್ಲಿ 1,35,381, ದ್ವಿತೀಯ ಸಂಪರ್ಕದಲ್ಲಿ 1,51,406 ಜನರು ಇದ್ದಾರೆ.
ಕರ್ನಾಟಕದಲ್ಲಿ ಅತಿ ಹೆಚ್ಚು ಆರ್ಟಿಪಿಸಿಆರ್ ಪರೀಕ್ಷೆ!
ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರಲು ಬಹುಮುಖ್ಯ ಕಾರಣವಾಗಿದ್ದು ಅತಿ ಹೆಚ್ಚು ಕೋವಿಡ್ ಪರೀಕ್ಷೆ ಮಾಡಿಸಿದ್ದು. ರ‍್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ ಆರ್ಟಿಪಿಸಿಆರ್ ಪರೀಕ್ಷೆಯನ್ನು ಹೆಚ್ಚಾಗಿ ಮಾಡಲಾಗುತ್ತಿದೆ.
ಇದಕ್ಕೂ ಮೊದಲು ಕೋವಿಡ್ ಸೋಂಕಿತರ ಸಂಖ್ಯೆ ಅತಿ ಹೆಚ್ಚು ಇದ್ದದ್ದು ಕರ್ನಾಟಕದಲ್ಲೇ. ಮೊದಲ 5 ಸ್ಥಾನದಲ್ಲಿ ಕರ್ನಾಟಕ ರಾಜ್ಯವಿತ್ತು. ಆದರೆ ಹೆಚ್ಚು ಜನರಿಗೆ ಸೋಂಕು ಪರೀಕ್ಷೆ ಮಾಡಿಸಿದ ಕಾರಣ ಕೊರೊನಾ ನಿಧಾನವಾಗಿ ನಿಯಂತ್ರಣಕ್ಕೆ ಬರುತ್ತಿದೆ.
ಇದೀಗ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಅತಿ ಹೆಚ್ಚು ಆರ್ಟಿಪಿಸಿಆರ್ ಪರೀಕ್ಷೆಯನ್ನು ರಾಜ್ಯದಲ್ಲಿ ಮಾಡಲಾಗಿದೆ. ಈ ಹಿಂದೆ ಕೋವಿಡ್ ಏರಿಕೆ ಆದಾಗ ಅಸಮಾಧಾನವಿತ್ತು. ಇದೀಗ ಕೋವಿಡ್ ಪರೀಕ್ಷೆ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಈವರೆಗೆ 72,00,005 ಮಂದಿಗೆ ಆರ್ಟಿಪಿಸಿಆರ್ ಪರೀಕ್ಷೆ ಮಾಡಲಾಗಿದೆ.