ಬೆಂಗಳೂರು: ರಾಜ್ಯದಲ್ಲಿಂದು 9,803 ಮಂದಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, ಇದರಲ್ಲಿ 107 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,50,652ಕ್ಕೆ ಏರಿಕೆ ಆಗಿದೆ. ಪಾಸಿಟಿವ್ ದರವೂ ಶೇ.1.09ಕ್ಕೆ ಏರಿಕೆ ಕಂಡಿದೆ. ಇತ್ತ 110 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 39,08,828 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಸೋಂಕಿನಿಂದ ಮೃತಪಟ್ಟ ವರದಿಯಾಗಿಲ್ಲ, ಸಾವಿನ ಸಂಖ್ಯೆ 40,064 ರಷ್ಟಿದೆ.
ಸದ್ಯ ಸಕ್ರಿಯ ಪ್ರಕರಣಗಳು 1,718 ರಷ್ಟಿವೆ. ವಿಮಾನ ನಿಲ್ದಾಣದಲ್ಲಿ 5,124 ಮಂದಿ ತಪಾಸಣೆಗೆ ಒಳಪಟ್ಟಿದ್ದಾರೆ. ಇನ್ನು ಬೆಂಗಳೂರಿನಲ್ಲಿ 100 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 17,86,366 ಕ್ಕೆ ಏರಿಕೆ ಆಗಿದೆ. ಇಂದು 98 ಮಂದಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ 17,67,750 ಜನ ಗುಣಮುಖರಾಗಿದ್ದಾರೆ. ಒಟ್ಟು ಸಾವಿನ ಸಂಖ್ಯೆ 16,963 ರಷ್ಟಿದೆ.
ರೂಪಾಂತರಿ ವೈರಸ್ ಅಪಡೇಟ್ಸ್:
ಅಲ್ಫಾ - 156
ಬೇಟಾ - 08
ಡೆಲ್ಟಾ ಸಬ್ ಲೈನ್ ಏಜ್ - 4623
ಇತರೆ - 331
ಒಮಿಕ್ರಾನ್ - 5422
BAI.1.529 - 1005
BA1 - 100
BA2 - 4317
ಒಟ್ಟು - 10,540
(ಇದನ್ನೂ ಓದಿ: ಸೌದಿ ಅರೇಬಿಯಾದಲ್ಲಿ ಕೋವಿಡ್ ಹೆಚ್ಚಳ: ಭಾರತ ಸೇರಿ 16 ದೇಶಗಳಿಗೆ ಪ್ರಯಾಣ ನಿಷೇಧ)