ಬೆಂಗಳೂರು: ಕೇಂದ್ರ ಸರ್ಕಾರದಿಂದ 2022-2023ನೇ ಸಾಲಿನಲ್ಲಿ ರಾಜ್ಯ ಸರ್ಕಾರವು ಹೊಸದಾಗಿ 72 ಸಾವಿರ ಕೋಟಿ ರೂ. ಸಾಲ ಪಡೆಯಲು ನಿರ್ಧರಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು ಕಳೆದ ಎರಡು ವರ್ಷಗಳಲ್ಲಿ ಹೆಚ್ಚುವರಿ ಸಾಲವನ್ನು ಅನುಮತಿಸಿದಾಗ ನಾವು ಸಾಲವನ್ನು ನಿಯಂತ್ರಣದಲ್ಲಿಡುವಲ್ಲಿ ಯಶಸ್ವಿಯಾಗಿದ್ದೇವೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಆಯವ್ಯಯದ 67 ಸಾವಿರ ಕೋಟಿ ರೂ. ಬದಲಿಗೆ 63,100 ಕೋಟಿಗೆ ಸಾಲವನ್ನು ನಿರ್ಬಂಧಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ. ಇದೇ ವೇಳೆ, 2022-2023ನೇ ಸಾಲಿಗೆ 72 ಸಾವಿರ ಕೋಟಿ ರೂ. ಸಾಲವನ್ನು ಪಡೆಯಲು ಯೋಜಿಸಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ಬಜೆಟ್ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ.
ವಾಣಿಜ್ಯ ಇಲಾಖೆ:
- 2021-22 ಸಾಲಿನಲ್ಲಿ 76,473 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹದ ಗುರಿಗೆ ಎದುರಾಗಿ ಫೆಬ್ರವರಿ ಅಂತ್ಯಕ್ಕೆ 70,757 ಕೋಟಿ ರೂ. ಸಂಗ್ರಹ
- 2022-23 ಸಾಲಿನಲ್ಲಿ 77,010 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹ ಗುರಿ
- 2021-22 ಸಾಲಿನಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 12,655 ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿ ನಿಗದಿಯಾಗಿದ್ದು, ಫೆಬ್ರವರಿ ಅಂತ್ಯಕ್ಕೆ 12,105 ಕೋಟಿ ರೂ. ರಾಜಸ್ವ ಸಂಗ್ರಹ ಮಾಡಲಾಗಿದೆ.
- 2022-23 ಸಾಲಿನಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ 15,000 ಕೋಟಿ ರೂ.ರಾಜಸ್ವ ಸಂಗ್ರಹದ ಗುರಿ
ಅಬಕಾರಿ ಇಲಾಖೆ:
- 2021-22 ಸಾಲಿಗೆ ಅಬಕಾರಿ ಇಲಾಖೆಗೆ 24,580 ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿ ನಿಗದಿ ಪಡಿಸಲಾಗಿದ್ದು, ಫೆಬ್ರವರಿ ಅಂತ್ಯಕ್ಕೆ 23,726 ಕೋಟಿ ರೂ. ಸಂಗ್ರಹ
- 2022-23ಸಾಲಿನಲ್ಲಿ 29,000 ಕೋಟಿ ಅಬಕಾರಿ ರಾಜಸ್ವ ಸಂಗ್ರಹದ ಗುರಿ
- ಸಾರಿಗೆ ಇಲಾಖೆ:
- 2021-22 ಸಾಲಿನಲ್ಲಿ ಸಾರಿಗೆ ಇಲಾಖೆಗೆ 7515 ಕೋಟಿ ರೂ. ರಾಜಸ್ವ ಸಂಗರಹದ ಗುರಿ ಇದ್ದು, ಫೆಬ್ರವರಿವರೆಗೆ ಕೇವಲ 5960 ಕೋಟಿ ರೂ. ಸಂಗ್ರಹ
- 2022-23ನೇ ಸಾಲಿನಲ್ಲಿ 8,007 ಕೋಟಿ ರೂ. ಸಂಗ್ರಹದ ಗುರಿ