ETV Bharat / city

ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸರ್ಕಾರದಿಂದ ಕೋವಿಡ್ ಮುಂಜಾಗ್ರತಾ ಕ್ರಮಗಳು ಹೀಗಿವೆ..

ಥರ್ಮಲ್‌ ಸ್ಕ್ಯಾನರ್‌, ಪಲ್ಸ್‌ ಆಕ್ಸಿಮೀಟರ್‌, ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳ ವ್ಯವಸ್ಥೆಯನ್ನೂ ಮಾಡಲಾಗಿದೆ. ಕೆಮ್ಮು, ನೆಗಡಿ, ಜ್ವರದಿಂದ ಬಳಲುತ್ತಿರುವ, ಇಲ್ಲವೇ ಈ ಲಕ್ಷಣಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ..

Karnataka governament 's preparation for SSLC Exam
ಜುಲೈ 19 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ; ಸರ್ಕಾರದಿಂದ ಕೋವಿಡ್ ಮುಂಜಾಗ್ರತಾ ಕ್ರಮಗಳು ಹೀಗಿವೆ...
author img

By

Published : Jul 17, 2021, 9:58 PM IST

Updated : Jul 18, 2021, 7:43 PM IST

ಬೆಂಗಳೂರು : ಈ ಬಾರಿ ವಿಶೇಷ ಕಾಳಜಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರಾಜ್ಯ ಸರ್ಕಾರ ನಡೆಸುತ್ತಿದೆ. ಇದಕ್ಕಾಗಿ 1,19,469 ಮಂದಿಯನ್ನು ನಿಯೋಜಿಸಿದೆ. ಈ ಬಾರಿಯ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಹೊಸ ಮಾದರಿಯಲ್ಲಿ ಉತ್ತರ ಬರೆಯಲಿದ್ದಾರೆ. ಒಟ್ಟು 8.75 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

6 ಸಾವಿರಕ್ಕೂ ಅಧಿಕ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 4,884 ಸರ್ಕಾರಿ, 1,831 ಖಾಸಗಿ, 1,294 ಅನುದಾನಿತ, 1,759 ಅನುದಾನರಹಿತ ಶಾಲೆಗಳ ಪರೀಕ್ಷಾ ಕೇಂದ್ರಗಳಿವೆ. ಇದರಲ್ಲಿ ಸಾಮಾನ್ಯ ಪರೀಕ್ಷಾ ಕೇಂದ್ರಗಳು 4,708, ಖಾಸಗಿ ಪರೀಕ್ಷಾ ಕೇಂದ್ರಗಳು 176, ಕ್ಲಸ್ಟರ್ ಪರೀಕ್ಷಾ ಕೇಂದ್ರಗಳು 2,166 ಹಾಗೂ 2, 542 ನಾನ್‍ಕ್ಲಸ್ಟರ್ ಪರೀಕ್ಷಾ ಕೇಂದ್ರಗಳಾಗಿವೆ.

8 ಲಕ್ಷ 76 ಸಾವಿರದ 581 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, 3,51,303 ಸರ್ಕಾರಿ, 2,35,908 ಅನುದಾನಿತ ಹಾಗೂ 2,89,370 ಅನುದಾನರಹಿತ ಅಭ್ಯರ್ಥಿಗಳಿದ್ದಾರೆ. ಒಟ್ಟು 73,066 ಕೊಠಡಿಗಳನ್ನು ಪರೀಕ್ಷೆಗೆ ತೆಗೆದುಕೊಳ್ಳಲಾಗಿದೆ.

ಜುಲೈ 19 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ; ಸರ್ಕಾರದಿಂದ ಕೋವಿಡ್ ಮುಂಜಾಗ್ರತಾ ಕ್ರಮಗಳು ಹೀಗಿವೆ...

4,884 ಮುಖ್ಯ ಅಧೀಕ್ಷಕರನ್ನು ನಿಯೋಜಿಸಲಾಗಿದೆ. 80,389 ಕೊಠಡಿ ಮೇಲ್ವಿಚಾರಕರು, 4,884 ಸ್ಥಾನಿಕ ಜಾಗೃತ ದಳದವರನ್ನು ಬಳಸಿಕೊಳ್ಳಲಾಗುತ್ತಿದೆ. ಜೊತೆಗೆ ಆಶಾ ಕಾರ್ಯಕರ್ತೆಯರು, ಆರಕ್ಷಕರಗಳನ್ನೂ ನಿಯೋಜಿಸಲಾಗಿದೆ.

8,76,581 ವಿದ್ಯಾರ್ಥಿಗಳ ಪೈಕಿ, 4,72,643 ಬಾಲಕರು, 4,03,938 ವಿದ್ಯಾರ್ಥಿನಿಯರಿದ್ದಾರೆ. ಅದರಲ್ಲಿ 7,83,955 ಹೊಸ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಟಿಯಿಂದ ಸರ್ಕಾರ ಹಿಂದೆಂದಿಗಿಂತಲೂ ಕೋವಿಡ್‌ ಕ್ರಮಗಳನ್ನು ಕೈಗೊಂಡಿದೆ.

ಇದನ್ನೂ ಓದಿ: Hall ticketಗಾಗಿ SSLC ವಿದ್ಯಾರ್ಥಿಗಳಿಂದ ಹರಿದು ಬಂದವು ದೂರುಗಳು

ಪರೀಕ್ಷೆ ಮೊದಲು ಮತ್ತು ನಂತರ ಪರೀಕ್ಷಾ ಕೇಂದ್ರ, ಸುತ್ತಮುತ್ತಲ ಪ್ರದೇಶ, ಶೌಚಾಲಯ, ಪೀಠೋಪಣಗಳ ಸ್ಯಾನಿಟೈಸಿಂಗ್‌ ಮಾಡಲಾಗುತ್ತದೆ. ಕೋವಿಡ್‌ ಲಸಿಕೆ ಪಡೆದ ಪರೀಕ್ಷಾ ಸಿಬ್ಬಂದಿಯನ್ನು ಮಾತ್ರ ಕರ್ತವ್ಯಕ್ಕೆ ನಿಯೋಜಿಸಿಕೊಳ್ಳಲಾಗಿದೆ.

ದೈಹಿತ ಅಂತರ ಕಾಪಾಡುವ ವ್ಯವಸ್ಥೆ ಮಾಡಲಾಗಿದೆ. ಕೊಠಡಿಯಲ್ಲಿ ಕೇವಲ 12 ಮಕ್ಕಳು ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಒಂದು ಡೆಸ್ಕ್‌ಗೆ ಒಬ್ಬ ಪರೀಕ್ಷಾರ್ಥಿ ಮಾತ್ರ ಕುಳಿತುಕೊಳ್ಳಬೇಕು. ಅಭ್ಯರ್ಥಿಗಳು ಮಾಸ್ಕ್‌ ಧರಿಸುವುದು ಹಾಗೂ ಸ್ಯಾನಿಟೈಸೇಷನ್‌ ಕಡ್ಡಾಯವಾಗಿದೆ.

ಥರ್ಮಲ್‌ ಸ್ಕ್ಯಾನರ್‌, ಪಲ್ಸ್‌ ಆಕ್ಸಿಮೀಟರ್‌, ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳ ವ್ಯವಸ್ಥೆಯನ್ನೂ ಮಾಡಲಾಗಿದೆ. ಕೆಮ್ಮು, ನೆಗಡಿ, ಜ್ವರದಿಂದ ಬಳಲುತ್ತಿರುವ, ಇಲ್ಲವೇ ಈ ಲಕ್ಷಣಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ.

ಕೋವಿಡ್‌ ಪೀಡಿತ ಅಭ್ಯರ್ಥಿಗಳು ಇಲ್ಲವೇ ಐಸೋಲೇಷನ್‌ನಲ್ಲಿರುವ ಅಭ್ಯರ್ಥಿಗಳಿದ್ದರೆ ಸನಿಹದ ಕೋವಿಡ್‌ ಕೇರ್‌ ಕೇಂದ್ರದಲ್ಲಿ ಪರೀಕ್ಷೆಗೆ ಕೂರಲು ಕ್ರಮವಹಿಸಲಾಗಿದೆ. ಕಾಯ್ದಿಟ್ಟ ತುರ್ತು ವಾಹನಗಳ ವ್ಯವಸ್ಥೆ, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ, ಸುರಕ್ಷಿತ ವಾತಾವರಣ ಸೇರಿದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

Last Updated : Jul 18, 2021, 7:43 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.