ETV Bharat / city

ಕೊರೊನಾ ಮೂರನೇ ಅಲೆ ಭೀತಿ : ಜಿಲ್ಲಾ ತಾಂತ್ರಿಕ ತಜ್ಞರ ಸಮಿತಿ ರಚನೆ - corona guidelines

ಜಿಲ್ಲಾ ತಾಂತ್ರಿಕ ತಜ್ಞರ ಸಮಿತಿಗೆ ಸಾರ್ವಜನಿಕ ಆರೋಗ್ಯ ವಿಭಾಗದ ಹಿರಿಯ ತಜ್ಞ ವೈದ್ಯರು, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ, ಹಿರಿಯ ಶ್ವಾಸಕೋಶ ತಜ್ಞ, ತೀವ್ರ ನಿಗಾ ತಜ್ಞ, ಮಕ್ಕಳ ವೈದ್ಯರು, ಮೈಕ್ರೋಬಯೋಲಜಿಸ್ಟ್, ಹಿರಿಯ ಆಯುಷ್ ವೈದ್ಯರು ಸದಸ್ಯರಾಗಿರುತ್ತಾರೆ.

karnataka-government-established-district-technical-experts-committee
ಕೊರೊನಾ ಮೂರನೇ ಅಲೆ ಭೀತಿ : ಜಿಲ್ಲಾ ತಾಂತ್ರಿಕ ತಜ್ಞರ ಸಮಿತಿ ರಚನೆ
author img

By

Published : Aug 17, 2021, 3:09 AM IST

ಬೆಂಗಳೂರು : ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಕೊರೊನಾ ಮೂರನೇ ಅಲೆ ಎದುರಾಗುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಜಿಲ್ಲಾ ಮಟ್ಟದಲ್ಲೇ ಕೊರೊನಾ ನಿಯಂತ್ರಣ ಮಾಡಲು ಜಿಲ್ಲಾ ತಾಂತ್ರಿಕ ತಜ್ಞರ ಸಮಿತಿ(ಟಿಇಸಿ) ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಮಟ್ಟದಲ್ಲಿ ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಇರುವಂತೆಯೇ ಜಿಲ್ಲಾ ಮಟ್ಟದಲ್ಲಿ ತಾಂತ್ರಿಕ ತಜ್ಞರ ಸಮಿತಿ (ಟಿಇಸಿ) ರಚನೆ ಮಾಡಬೇಕು. ಜಿಲ್ಲಾ ಮಟ್ಟದ ತಜ್ಞರ ಸಮಿತಿಯು ಕೇಂದ್ರ ಸರ್ಕಾರ, ಐಸಿಎಂಆರ್, ಏಮ್ಸ್, ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಇತರೆ ಸಂಸ್ಥೆಗಳ ಮಾರ್ಗಸೂಚಿಗಳ ಮೇಲೆ ನಿರಂತರವಾಗಿ ನಿಗಾ ವಹಿಸಿ, ಸ್ಥಳೀಯವಾಗಿ ಕೊರೊನಾ ನಿಯಂತ್ರಣಕ್ಕೆ ಅಗತ್ಯವಿರುವ ಕ್ರಮಗಳ ಬಗ್ಗೆ ಜಿಲ್ಲಾಡಳಿತಕ್ಕೆ ಸಲಹೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Karnataka government established  District Technical Experts Committee
ಸರ್ಕಾರದ ಆದೇಶ

ಜಿಲ್ಲಾ ಟಿಇಸಿ ಸಮಿತಿಯು ನಿರಂತರವಾಗಿ ರಾಜ್ಯ ಮಟ್ಟದ ತಾಂತ್ರಿಕ ಸಲಹಾ ಸಮಿತಿ ಜೊತೆ ಸಂಪರ್ಕದಲ್ಲಿದ್ದು, ಅದರ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸಬೇಕು. ಜಿಲ್ಲಾ ಮಟ್ಟದ ಅಂಕಿ-ಅಂಶಗಳನ್ನು ಇತರೆ ಜಿಲ್ಲೆ ಹಾಗೂ ರಾಜ್ಯದ ಸರಾಸರಿಯೊಂದಿಗೆ ತಾಳೆ ನೋಡಿ ಅಗತ್ಯ ಕ್ರಮ ಕೈಗೊಳ್ಳಬೇಕು. ಇದರ ಆಧಾರದ ಮೇಲೆ ಜಿಲ್ಲಾಡಳಿತಕ್ಕೆ ಸೂಕ್ತ ಕ್ರಮಗಳಿಗಾಗಿ ಸಲಹೆ ನೀಡಬಹುದು ಎಂದು ತಿಳಿಸಲಾಗಿದೆ.

ಜಿಲ್ಲಾ ಮಟ್ಟದಲ್ಲಿ ತಾಂತ್ರಿಕ ತಜ್ಞರ ಸಮಿತಿಯಲ್ಲಿ ಯಾರಿರಬೇಕು?

ಸಾರ್ವಜನಿಕ ಆರೋಗ್ಯ ವಿಭಾಗದ ಹಿರಿಯ ತಜ್ಞ ವೈದ್ಯರು, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ, ಹಿರಿಯ ಶ್ವಾಸಕೋಶ ತಜ್ಞ, ತೀವ್ರ ನಿಗಾ ತಜ್ಞ, ಮಕ್ಕಳ ವೈದ್ಯರು, ಮೈಕ್ರೋಬಯೋಲಜಿಸ್ಟ್, ಹಿರಿಯ ಆಯುಷ್ ವೈದ್ಯರು ಸದಸ್ಯರಾಗಿರಬೇಕು. ಜತೆಗೆ ಜಿಲ್ಲಾ ಶಸ್ತ್ರಚಿಕಿತ್ಸಕರು, ಜಿಲ್ಲಾ ಆರೋಗ್ಯಾಧಿಕಾರಿಗಳು ವಿಶೇಷ ಆಹ್ವಾನಿರಾಗಿ ಇರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸಮಿತಿಯು ಕನಿಷ್ಠ ಪ್ರತಿ 15 ದಿನಗಳಿಗೊಮ್ಮೆ ಸಭೆ ಸೇರಬೇಕು. ಅಗತ್ಯ ಬಿದ್ದರೆ ಇನ್ನೂ ತ್ವರಿತಗತಿಯಲ್ಲಿ ಸಭೆಗಳನ್ನು ಸೇರಬೇಕು. ಸಭೆಯ ನಡಾವಳಿ ಹಾಗೂ ಜಿಲ್ಲಾ ಮಟ್ಟದ ಬೆಳವಣಿಗೆಗಳ ಬಗ್ಗೆ ಸಮಿತಿಯು ಕೂಡಲೇ ಮಾಹಿತಿಯನ್ನು ಆರೋಗ್ಯ ಇಲಾಖೆ ಆಯುಕ್ತರು ಹಾಗೂ ರಾಜ್ಯ ಮಟ್ಟದ ತಾಂತ್ರಿಕ ಸಲಹಾ ಸಮಿತಿಗೆ ಕಳುಹಿಸಬೇಕು ಎಂದು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಅಂಧ ವಿದ್ಯಾರ್ಥಿಗಳಿಗೆ ಉಚಿತ ಟಾಕಿಂಗ್ ಲ್ಯಾಪ್​ಟಾಪ್ : ಹೈಕೋರ್ಟ್​​ಗೆ ಸರ್ಕಾರದ ಮಾಹಿತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.