ETV Bharat / city

ಊರುಗಳಿಗೆ ತೆರಳೋ ವಲಸಿಗರಿಗೆ ವ್ಯವಸ್ಥೆ: 3 ದಿನದಲ್ಲಿ ಹೊರಟ್ರೆ ಕೆಎಸ್​ಆರ್​​ಟಿಸಿ ಪ್ರಯಾಣ ಫ್ರೀ

ರಾಜ್ಯದ ವಿವಿಧೆಡೆ ಸಿಲುಕಿರುವ ವಲಸಿಗರು ತಮ್ಮ ತಮ್ಮ ಊರುಗಳಿಗೆ ತೆರಳಲು ರಾಜ್ಯ ಸರ್ಕಾರ ಅನುವು ಮಾಡಿಕೊಟ್ಟಿದೆ. ಕೆಎಸ್​ಆರ್​ಟಿಸಿಯಲ್ಲಿ ಪ್ರಯಾಣಿಸುವವರ ಪ್ರಯಾಣ ಶುಲ್ಕವನ್ನು ಸರ್ಕಾರವೇ ಭರಿಸಲಿದೆ.

migrants
ವಲಸಿಗರು
author img

By

Published : May 3, 2020, 12:04 PM IST

ಬೆಂಗಳೂರು: ಇಂದಿನಿಂದ ಮೂರು ದಿನಗಳವರೆಗೆ ಕಾರ್ಮಿಕರಿಗೆ ತಮ್ಮೂರುಗಳಿಗೆ ಹೋಗಲು ಉಚಿತ ಪ್ರಯಾಣ ವ್ಯವಸ್ಥೆ ಮಾಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ‌ ನೀಡಿದ್ದಾರೆ.

ಬಡ ಕೂಲಿ ಕಾರ್ಮಿಕರ ಪರಿಸ್ಥಿತಿಯನ್ನು ಗಮನಿಸಿ ಇಂದಿನಿಂದ 3 ದಿನಗಳವರೆಗೆ ಜಿಲ್ಲಾ ಕೇಂದ್ರಗಳಿಂದ ಮತ್ತು ರಾಜಧಾನಿ ಬೆಂಗಳೂರಿನಿಂದ ಕರ್ನಾಟಕದಲ್ಲಿನ ತಮ್ಮ ತಮ್ಮ ಊರುಗಳಿಗೆ ಹೋಗುವ ಎಲ್ಲರಿಗೂ ಉಚಿತವಾಗಿ ಕೆಎಸ್ಆ​​​ರ್​​ಟಿಸಿ ಬಸ್‍ಗಳಲ್ಲಿ ತೆರಳಲು ಅನುವು ಮಾಡಿಕೊಡಲಾಗಿದೆ.
ಇದರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ನನ್ನ ಕಳಕಳಿಯ ಮನವಿ ಯಾವುದೇ ಬಸ್ ನಿಲ್ಧಾಣಗಳಲ್ಲಿ ಯಾರೂ ನೂಕುನುಗ್ಗಲು ಮಾಡಬಾರದು. ಜನರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಿಎಂ ಬಿಎಸ್​ವೈ ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.