ETV Bharat / city

ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 75 ಯೂನಿಟ್‌ ಉಚಿತ ವಿದ್ಯುತ್ ಪೂರೈಸಲು ಸರ್ಕಾರದ ಆದೇಶ - ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 75 ಯೂನಿಟ್‌ ಉಚಿತ ವಿದ್ಯುತ್

ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಈ ಸಮುದಾಯದವರಿಗೆ ಮೊದಲ 75 ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್ ಪೂರೈಸಲು ಆದೇಶಿಸಿದೆ.

Karnataka govt order
ಬೆಂಗಳೂರು
author img

By

Published : May 14, 2022, 6:44 AM IST

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಿಪಿಎಲ್ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ ಮಾಸಿಕ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ‌ನೀಡಲು ಆದೇಶಿಸಲಾಗಿದೆ. ಈ ಸಂಬಂಧ ಇಂಧನ ಇಲಾಖೆ ಆದೇಶ ಹೊರಡಿಸಿದ್ದು, ಮೇ 1 ರಿಂದ ಅನ್ವಯವಾಗುವಂತೆ ಉಚಿತ ವಿದ್ಯುತ್ ಸರಬರಾಜು ಮಾಡಲು ಸೂಚಿಸಲಾಗಿದೆ.

ಉಚಿತ ವಿದ್ಯುತ್ ಸರಬರಾಜು ಮಾಡಲು ವಿದ್ಯುತ್ ಸರಬರಾಜು ಕಂಪನಿಗಳು ಸಲ್ಲಿಸುವ ಅಂಕಿ ಅಂಶಗಳನ್ನು ಪರಿಗಣಿಸಬೇಕು. ಪ್ರತಿ ಸಾಲಿನಲ್ಲಿ ಸಚಿವ ಸಂಪುಟ ಅನುಮೋದಿಸಿರುವ ಪ್ರಕಾರವಾಗಿ ಒದಗಿಸಬೇಕಾದ ವಿದ್ಯುತ್‌ ಸಹಾಯ ಧನದ ಮೊತ್ತದ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಂಡ ನಂತರ ವಿದ್ಯುತ್ ಸರಬರಾಜು ಕಂಪನಿಗಳು ಸದರಿ ಮೊತ್ತದ ವಿವರಗಳೊಂದಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಕ ಆಯೋಗಕ್ಕೆ ತಮ್ಮ ಪ್ರಸ್ತಾವನೆಯನ್ನು ಸಲ್ಲಿಸಬೇಕು.

ಉಚಿತ ವಿದ್ಯುತ್ ಪಡೆಯುವ ಸ್ಥಾವರಗಳಿಗೆ ಮಾಪಕವನ್ನು ಕಡ್ಡಾಯವಾಗಿ ಅಳವಡಿಸಬೇಕು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಕ್ಕೆ ಸೇರಿದ ಈ ಪ್ರವರ್ಗದ ವಿದ್ಯುತ್ ಗ್ರಾಹಕರುಗಳು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರದ ದೃಢಿಕೃತ ದಾಖಲೆಯನ್ನು ಒದಗಿಸಬೇಕು.

ಈ ಸೌಲಭ್ಯಕ್ಕೆ ಅರ್ಹರಾಗುವ ವಿದ್ಯುತ್ ಗ್ರಾಹಕರುಗಳು ಮಾಸಿಕ ವಿದ್ಯುತ್, ಬಿಲ್ಲನ್ನು ಸಂಪೂರ್ಣವಾಗಿ ನಿಗದಿತ ಅವಧಿಯೊಳಗೆ ಪಾವತಿಸಿದ ನಂತರ, ಸದರಿ ಗ್ರಾಹಕರುಗಳಿಗೆ DBT ಯೋಜನೆಯ ವ್ಯವಸ್ಥೆಯಡಿ ಸರ್ಕಾರದಿಂದ ಸಹಾಯ ಧನ ನೀಡುವ ಮುಖಾಂತರ ಮರು ಪಾವತಿಸಲಾಗುವುದು. ಜತೆಗೆ ಈ ಪ್ರವರ್ಗದ ವಿದ್ಯುತ್ ಗ್ರಾಹಕರುಗಳು ಏಪ್ರಿಲ್ 30ರ ಅಂತ್ಯಕ್ಕೆ ಇರುವ ಬಾಕಿ ವಿದ್ಯುತ್ ಶುಲ್ಕದ ಮೊತ್ತವನ್ನು ಸಂಪೂರ್ಣವಾಗಿ ಪಾವತಿಸಿರಬೇಕು.

ಇದನ್ನೂ ಓದಿ: ಆ್ಯಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಸರ್ಕಾರದಿಂದ ನಿವೇಶನ.. ನಾಳೆಯೇ ಆದೇಶ : ಸಿಎಂ ಘೋಷಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.