ಬೆಂಗಳೂರು: ರಾಜ್ಯ ಸರ್ಕಾರ ಕೋವಿಡ್, ಒಮಿಕ್ರಾನ್ ಹೆಚ್ಚಳ ಹಿನ್ನೆಲೆ ಕ್ರಿಸ್ಮಸ್ಸಂಭ್ರಮಾಚರಣೆಗೆ ಕೆಲವೊಂದು ನಿರ್ಬಂಧ ಹೇರಿದೆ. ಈ ಹಿಂದೆ ಒಮಿಕ್ರಾನ್ ಕೋವಿಡ್ ಸಂಬಂಧ ಸಿಎಂ ಸುವರ್ಣಸೌಧಲ್ಲಿ ಸಭೆ ನಡೆಸಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಸಭೆ ಬಳಿಕ ಮಾತನಾಡಿದ ಸಿಎಂ, ಬಹಿರಂಗ ಸಂಭ್ರಮಾಚರಣೆಗೆ ನಿರ್ಬಂಧ ಹೇರಲಾಗಿದೆ ಎಂದರು. ಇದಕ್ಕೆ ಜನರು ಸಹಕರಿಸಬೇಕು. ಕ್ರಿಸ್ ಮಸ್ ಆಚರಣೆಗೆ ಚರ್ಚ್ಗೆ ಹೋಗ್ತಾರೆ. ಇದಕ್ಕೆ ಯಾವುದೇ ನಿರ್ಬಂಧ ಇಲ್ಲ. ರೆಸ್ಟೋರೆಂಟ್ ಹಾಗೂ ಕ್ಲಬ್ಗಳಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗೆ ಡಬಲ್ ಡೋಸ್ ಲಸಿಕೆ ಕಡ್ಡಾಯವಾಗಿದೆ ಎಂದು ವಿವರಿಸಿದರು.
ಓದಿ: ಥಾವರ್ ಚಂದ್ ಗೆಹ್ಲೋಟ್ರನ್ನು ಭೇಟಿ ಮಾಡಿದ ಕೇರಳ ರಾಜ್ಯಪಾಲ
ಕ್ರಿಸ್ಮಸ್ ಆಚರಣೆ: ಚರ್ಚ್ ಆವರಣದಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಪ್ರಾರ್ಥನೆ/ ಸಾಮೂಹಿಕ ಕಾರ್ಯಕ್ರಮ ವೇಳೆ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಬೇಕು. ಮಾಸ್ಕ್, ಸಾಮಾಜಿಕ ಅಂತರ ಸ್ಯಾನಿಟೈಸ್ ಕಡ್ಡಾಯ. ಆಚರಣೆಗಳು ಅಥವಾ ಪ್ರಾರ್ಥನೆಗಳನ್ನು ನಡೆಸಲು ಯಾವುದೇ ಸಾರ್ವಜನಿಕ ಸ್ಥಳಗಳು/ರಸ್ತೆಗಳು/ಉದ್ಯಾನವನ ಇತ್ಯಾದಿಗಳನ್ನು ಬಳಸುವಂತಿಲ್ಲ ಎಂದು ಹೇಳಿದರು.