ಬೆಂಗಳೂರು: ನಾಯಕತ್ವ ಬದಲಾವಣೆಯ ಕೂಗಿನ ಮಧ್ಯೆಯೇ ಸರ್ಕಾರ ಕೆಲ ಅಧಿಕಾರಿಗಳ ವರ್ಗಾವಣೆ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ, 43 ತಹಶೀಲ್ದಾರ್ ಹಾಗೂ ನಾಲ್ವರು ಕೆಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ.
ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಐಪಿಎಸ್ ಅಧಿಕಾರಿಗಳಾದ ವರ್ತಿಕಾ ಕಟಿಯಾರ್, ಜಿ.ಸಂಗೀತರ ಈ ಹಿಂದಿನ ವರ್ಗಾವಣೆ ಆದೇಶವನ್ನು ರದ್ದುಗೊಳಿಸಲಾಗಿದೆ.
![ಸರ್ಕಾರದ ಆದೇಶ ಪ್ರತಿ](https://etvbharatimages.akamaized.net/etvbharat/prod-images/kn-bng-08-1ips-officer-posting-two-withheld-state-goverment-order-ka10032_22072021233532_2207f_1626977132_581.jpg)