ETV Bharat / city

ಶಾಸಕರು - ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣ ಹಿಂಪಡೆದ ಸರ್ಕಾರ : ದಾಖಲೆ ನೀಡಲು ಹೈಕೋರ್ಟ್ ಸೂಚನೆ - ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ಹಿಂಪಡೆದ ಪ್ರಕರಣ

ಶಾಸಕರು ಮತ್ತು ಸಂಸದರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವ ವಿಚಾರದಲ್ಲಿ ರಾಜ್ಯ ಸರ್ಕಾರ ತಪ್ಪೆಸಗಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಅಫಿಡವಿಟ್ ಸಲ್ಲಿಸಬೇಕು ಎಂದು ಹೈಕೋರ್ಟ್ ಹೇಳಿದೆ.

karnataka-high-court-hearing-on-withdraws-criminal-case-against-lawmakers
ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣ ಹಿಂಪಡೆದ ಸರ್ಕಾರ : ದಾಖಲೆ ನೀಡಲು ಹೈಕೋರ್ಟ್ ಸೂಚನೆ
author img

By

Published : Oct 22, 2021, 10:48 PM IST

ಬೆಂಗಳೂರು: ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದಿರುವುದು ಮತ್ತು ಹಿಂಪಡೆಯಲು ಉದ್ದೇಶಿಸಿರುವ ಪ್ರಕರಣಗಳ ಪಟ್ಟಿಯನ್ನು ಅಮಿಕಸ್ ಕ್ಯೂರಿಗೆ ಒದಗಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮೇಲ್ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನದ ಮೇರೆಗೆ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಅಮಿಕಸ್ ಕ್ಯೂರಿ ಆದಿತ್ಯ ಸೋಂಧಿ ವಾದಿಸಿ, ಶಾಸಕರು ಮತ್ತು ಸಂಸದರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವ ವಿಚಾರದಲ್ಲಿ ರಾಜ್ಯ ಸರ್ಕಾರ ತಪ್ಪೆಸಿಗಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಅಫಿಡವಿಟ್ ಸಲ್ಲಿಸಬೇಕು. ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವ ರಾಜ್ಯ ಸರ್ಕಾರದ ಆದೇಶ ಮತ್ತು ಮ್ಯಾಜಿಸ್ಟ್ರೇಟ್ ಆದೇಶಗಳನ್ನು ಹೈಕೋರ್ಟ್ ಪರಿಶೀಲಿಸಬಹುದು ಎಂದು ತಿಳಿಸಿದರು.

ಸರ್ಕಾರದ ಪರ ವಕೀಲರು ವಾದಿಸಿ, ಶಾಸಕರು ಮತ್ತು ಸಂಸದರ ವಿರುದ್ಧದ ಹಿಂಪಡೆದಿರುವ ಕ್ರಿಮಿನಲ್ ಪ್ರಕರಣ ಮತ್ತು ಹಿಂಪಡೆಯಲು ಉದ್ದೇಶಿಸಿರುವ ಪ್ರಕರಣಗಳ ಪಟ್ಟಿಯನ್ನು ಒಳಗೊಂಡ ಅಫಿಡವಿಟ್ ಸಿದ್ಧಪಡಿಸಲಾಗಿದೆ. ಈ ಅಫಿಡವಿಟ್​ ಅನ್ನು ಸದ್ಯದಲ್ಲೇ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದರು.

ಸರ್ಕಾರದ ವಕೀಲರ ಹೇಳಿಕೆ ದಾಖಲಿಸಿಕೊಂಡ ಪೀಠ, ರಾಜ್ಯ ಸರ್ಕಾರ ಸಿದ್ಧಪಡಿಸಿರುವ ವರದಿಯನ್ನು ಅಮಿಕಸ್ ಕ್ಯೂರಿಗೆ ನೀಡಬೇಕು. ಅದನ್ನು ಪರಿಶೀಲಿಸಿ ಅಮಿಕಸ್ ಕ್ಯೂರಿ ತಮ್ಮ ಆಕ್ಷೇಪಣೆ ಸಲ್ಲಿಸಬಹುದು ಎಂದು ತಿಳಿಸಿ ವಿಚಾರಣೆಯನ್ನು ನವೆಂಬರ್ 17ಕ್ಕೆ ಮುಂದೂಡಿತು.

ಇದನ್ನೂ ಓದಿ: ಕಾಲುವೆ ಜಾಗ ಒತ್ತುವರಿ ಮಾಡಿ ಮನೆ ನಿರ್ಮಾಣ ಆರೋಪ: ಸಚಿವ ಆನಂದ ಸಿಂಗ್ ವಿರುದ್ಧ ದೂರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.