ETV Bharat / city

ಹಿಜಾಬ್ ವಿವಾದ: ಹೈಕೋರ್ಟ್ ಹೊರಡಿಸಿದ ಮಧ್ಯಂತರ ತೀರ್ಪಿನಲ್ಲಿ ಏನೇನಿದೆ.?

ಶಿಕ್ಷಣ ಸಂಸ್ಥೆಗಳನ್ನು ಪುನಃ ತೆರೆಯಲು ಮತ್ತು ವಿದ್ಯಾರ್ಥಿಗಳಿಗೆ ಬೇಗನೆ ತರಗತಿಗಳಿಗೆ ಮರಳಲು ಅವಕಾಶ ನೀಡುವಂತೆ ನಾವು ರಾಜ್ಯ ಸರ್ಕಾರ ಮತ್ತು ಇತರರಿಗೆ ವಿನಂತಿಸುತ್ತೇವೆ ಎಂದು ಮಧ್ಯಂತರ ತೀರ್ಪಿನಲ್ಲಿ ಹೈಕೋರ್ಟ್ ಹೇಳಿದೆ.

karnataka-high-court-interim-verdict-on-hijab-issue
ಹಿಜಾಬ್ ವಿವಾದ: ಹೈಕೋರ್ಟ್ ಹೊರಡಿಸಿದ ಮಧ್ಯಂತರ ತೀರ್ಪಿನಲ್ಲಿ ಏನೇನಿದೆ.?
author img

By

Published : Feb 11, 2022, 3:08 PM IST

ಬೆಂಗಳೂರು: ಹಿಜಾಬ್ ಧರಿಸಲು ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಕೆಲವು ವಿದ್ಯಾರ್ಥಿನಿಯರು ಮತ್ತು ಅವರ ಪೋಷಕರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್ ತ್ರಿಸದಸ್ಯ ಪೀಠ ಲಿಖಿತವಾಗಿ ಮಧ್ಯಂತರ ತೀರ್ಪು ಹೊರಡಿಸಿದೆ.

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸದಂತೆ ನಿರ್ಬಂಧ ವಿಧಿಸುವ ಮೂಲಕ ತಮ್ಮ ಧಾರ್ಮಿಕ ಹಕ್ಕು ಉಲ್ಲಂಘನೆ ಆಗಿದೆ ಎಂದು ಉಡುಪಿಯ ಸರ್ಕಾರಿ ಬಾಲಕಿರ ಪಿಯು ಕಾಲೇಜು ವಿದ್ಯಾರ್ಥಿನಿಯರು ಮತ್ತು ಅವರ ಪೋಷಕರು ಸಲ್ಲಿಸಿದ ಹಲವು ಪ್ರತ್ಯೇಕ ರಿಟ್ ಅರ್ಜಿಗಳನ್ನು ಗುರುವಾರ ಹೈಕೋರ್ಟ್ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತ್ತು. ಈ ಸಂಬಂಧ ಮಧ್ಯಂತರ ಆದೇಶ ಹೊರಡಿಸುವುದಾಗಿ ತಿಳಿಸಿತ್ತಾದರೂ ಕಲಾಪದ ವೇಳೆ ಲಿಖಿತ ಆದೇಶ ನೀಡಿರಲಿಲ್ಲ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಲಿಖಿತ ಮಧ್ಯಂತರ ಆದೇಶ ಹೊರಡಿಸಿದೆ.

ಮಧ್ಯಂತರ ಆದೇಶದ ಸಾರಾಂಶ: 'ನಮ್ಮದು ಸುಸಂಸ್ಕೃತ ಸಮಾಜವಾಗಿರುವುದರಿಂದ, ಧರ್ಮ, ಸಂಸ್ಕೃತಿ ಅಥವಾ ಅಂತಹುದೇ ಹೆಸರಿನಲ್ಲಿ ಯಾವುದೇ ವ್ಯಕ್ತಿ ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವ ಯಾವುದೇ ಕೃತ್ಯವನ್ನು ಮಾಡಲು ಅವಕಾಶವಿಲ್ಲ. ಪ್ರತಿಭಟನೆಗಳನ್ನು ನಡೆಸುವುದು ಹಾಗೂ ಇದೇ ಕಾರಣಕ್ಕಾಗಿ ಶಿಕ್ಷಣ ಸಂಸ್ಥೆಗಳನ್ನು ಅನಿರ್ದಿಷ್ಟವಾಗಿ ಮುಚ್ಚುವುದು ಸಂತೋಷದ ಸಂಗತಿಯಲ್ಲ.

ಈ ಪ್ರಕರಣಗಳ ತುರ್ತು ವಿಚಾರಣೆಯು ಮುಂದುವರೆದಿದೆ. ರಜೆಗಳ ವಿಸ್ತರಣೆಯು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ಹಾನಿಕಾರಕವಾಗಿದೆ. ಹೀಗಾಗಿ, ಸಾರ್ವಜನಿಕರು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುತ್ತಾರೆ ಎಂದು ನಾವು ಭಾವಿಸುತ್ತೇವೆ ಮತ್ತು ನಂಬುತ್ತೇವೆ‌' ಎಂದು ಹೈಕೋರ್ಟ್​ ಹೇಳಿದೆ.

ಇದನ್ನೂ ಓದಿ: ಹಿಜಾಬ್ ಗಲಾಟೆ: ಕಾಂಗ್ರೆಸ್ಸಿಗರ ಬಣ್ಣ ಬಯಲಾಗಿದೆ ಎಂದ ಸಚಿವ ಬಿ.ಸಿ.ನಾಗೇಶ್

ಹಾಗೆಯೇ, 'ಶಿಕ್ಷಣ ಸಂಸ್ಥೆಗಳನ್ನು ಪುನಃ ತೆರೆಯಲು ಮತ್ತು ವಿದ್ಯಾರ್ಥಿಗಳಿಗೆ ಬೇಗನೆ ತರಗತಿಗಳಿಗೆ ಮರಳಲು ಅವಕಾಶ ನೀಡುವಂತೆ ನಾವು ರಾಜ್ಯ ಸರ್ಕಾರ ಮತ್ತು ಇತರರಿಗೆ ವಿನಂತಿಸುತ್ತೇವೆ. ಈ ಎಲ್ಲಾ ಅರ್ಜಿಗಳು ಇತ್ಯರ್ಥವಾಗುವರೆಗೆ, ನಾವು ಎಲ್ಲಾ ವಿದ್ಯಾರ್ಥಿಗಳನ್ನು ಅವರ ಧರ್ಮ ಅಥವಾ ನಂಬಿಕೆಯನ್ನು ಪರಿಗಣಿಸದೆ ಕೇಸರಿ ಶಾಲು, ಸ್ಕಾರ್ಫ್‌ಗಳು, ಹಿಜಾಬ್ ಹಾಗೂ ಧಾರ್ಮಿಕ ಧ್ವಜಗಳನ್ನು ಕಾಲೇಜು ಅಥವಾ ತರಗತಿಯಲ್ಲಿ ಧರಿಸುವುದನ್ನು ಮುಂದಿನ ಆದೇಶದವರೆಗೆ ನಿರ್ಬಂಧಿಸುತ್ತೇವೆ' ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇದರ ಜೊತೆಗೆ 'ಈ ಆದೇಶವು ಕಾಲೇಜು ಅಭಿವೃದ್ಧಿ ಸಮಿತಿಗಳು ವಿದ್ಯಾರ್ಥಿಯ ಡ್ರೆಸ್ ಕೋಡ್/ಸಮವಸ್ತ್ರವನ್ನು ಸೂಚಿಸಿರುವ ಸಂಸ್ಥೆಗಳಿಗೆ ಮಾತ್ರ ಸೀಮಿತವಾಗಿದೆ ಎಂದು ನಾವು ಸ್ಪಷ್ಟಪಡಿಸುತ್ತೇವೆ' ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.