ETV Bharat / city

ಬಿಡಿಎ ಜಾಗದಲ್ಲಿನ ಅಕ್ರಮ ಕಟ್ಟಡ ಸಕ್ರಮ ಕಾಯ್ದೆ; ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್ - ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್

ಬಿಡಿಎ ಜಾಗದಲ್ಲಿ ಈಗಾಗಲೇ ನಿರ್ಮಾಣ ಮಾಡಿರುವ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸುವ ನೂತನ ಕಾಯ್ದೆ ವಿರುದ್ಧ ಹೈಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಕೆಯಾಗಿದೆ. ಈ ಅರ್ಜಿ ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಸರ್ಕಾರ ಹಾಗೂ ಬಿಡಿಎಗೆ ನೋಟಿಸ್‌ ನೀಡಿದೆ.

Karnataka high court issues notice on PIL challenging amendment to BDA act to regularize illegal construction
ಬಿಡಿಎ ಜಾಗದಲ್ಲಿನ ಅಕ್ರಮ ಕಟ್ಟಡ ಸಕ್ರಮ ಕಾಯ್ದೆ; ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್
author img

By

Published : Dec 19, 2020, 3:00 AM IST

ಬೆಂಗಳೂರು : ಬಿಡಿಎಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ನಿಮಿರ್ಸಿರುವ ಕಟ್ಟಡಗಳನ್ನು ಸಕ್ರಮಗೊಳಿಸುವ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್‌ ರಾಜ್ಯ ಸರ್ಕಾರ, ಬಿಡಿಎಗೆ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ವಿಜಯ್ ಮೆನನ್ ಮತ್ತಿತರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆಗಳನ್ನು ಸಲ್ಲಿಸಲು ಸೂಚಿಸಿದೆ.

ಅರ್ಜಿದಾರರ ಕೋರಿಕೆ

ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸುವ ಕಾಯ್ದೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಆದರೆ ಸರ್ಕಾರ, ವಾಮ ಮಾರ್ಗದ ಮೂಲಕ ಬಿಡಿಎಯಿಂದ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸುವ ಕಾಯ್ದೆ ಜಾರಿಗೊಳಿಸುತ್ತಿದೆ. ಅದಕ್ಕಾಗಿ ಬಿಡಿಎ ತಿದ್ದುಪಡಿ ಕಾಯಿದೆ 2020 ಜಾರಿಗೊಳಿಸಿರುವುದು ಕಾನೂನು ಬಾಹಿರ ಕ್ರಮವಾಗಿದೆ ಎಂದು ಆರೋಪಿಸಿದ್ದಾರೆ.

ಅಲ್ಲದೆ, ಹೊಸ ತಿದ್ದುಪಡಿ ಕಾಯ್ದೆಗಳಿಂದ ಬೆಂಗಳೂರು ನಗರದಲ್ಲಿ ಕಟ್ಟಡ ಸೇರಿದಂತೆ ಎಲ್ಲ ನಿಯಮಗಳನ್ನು ಪಾಲನೆ ಮಾಡುತ್ತಿರುವ ನಾಗರಿಕರಿಗೆ ತೊಂದರೆಯಾಗಲಿದೆ. ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸಲು ಅವಕಾಶ ನೀಡುತ್ತಿರುವುದು ಸಂವಿಧಾನದ ಕಲಂ 14 ಹಾಗೂ 21ರ ಸ್ಪಷ್ಟ ಉಲ್ಲಂನೆಯಾಗಿದೆ. ಜೊತೆಗೆ ಬಿಎಂಪಿಸಿ ಸಭೆಯಲ್ಲಿ ಸಮಾಲೋಚನೆ ನಡೆಸದೆ ನಿಯಮಗಳನ್ನು ಗಾಳಿಗೆ ತೂರಿ ತಂದಿರುವ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸಬೇಕು ಎಂದು ಅಜಿರ್ಯಲ್ಲಿ ಕೋರಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.