ETV Bharat / city

ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಕೈಬಿಟ್ಟ ವಿಚಾರ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ - ಕರ್ನಾಟಕ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ರಾಜಕೀಯ ನಾಯಕರ ವಿರುದ್ಧದ ಪ್ರಕರಣಗಳನ್ನು ಕೈಬಿಡಲು ಪ್ರಾಸಿಕ್ಯೂಷನ್ ಯಾವ ಆಧಾರದಲ್ಲಿ ಶಿಫಾರಸು ಮಾಡಿದೆ ಎಂಬುದರ ವರದಿ ತರಿಸಿಕೊಂಡು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಹೈಕೋರ್ಟ್​ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

high court
ಹೈಕೋರ್ಟ್​
author img

By

Published : Dec 1, 2020, 7:35 PM IST

ಬೆಂಗಳೂರು: ಶಾಸಕರು ಹಾಗೂ ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಕೈಬಿಟ್ಟ ಸಚಿವ ಸಂಪುಟದ ಕ್ರಮ ಪ್ರಶ್ನಿಸಿ ಮತ್ತೊಂದು ಅರ್ಜಿ ಸಲ್ಲಿಕೆಯಾಗಿದ್ದು, ಈ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲ ಕ್ಲಿಫ್ಟನ್ ರೊಜಾರಿಯೋ ಸರ್ಕಾರ ಕ್ರಮ ನಿಯಮ ಬಾಹಿರವಾಗಿದೆ. ಶಾಸಕರು, ಸಂಸದರು, ಮಂತ್ರಿಗಳು ಸೇರಿದಂತೆ ಜನಪ್ರತಿನಿಧಿಗಳ ವಿರುದ್ಧ ದಾಖಲಿಸಿದ್ದ 62 ಕ್ರಿಮಿನಲ್ ಪ್ರಕರಣಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಹಾಗಿದ್ದರೆ ಪ್ರಕರಣದಲ್ಲಿ ಕೈಬಿಟ್ಟಿರುವ ರಾಜಕೀಯ ನಾಯಕರನ್ನು ಪ್ರತಿವಾದಿಗಳನ್ನಾಗಿಸಿ ಎಂದು ಸೂಚನೆ ನೀಡಿತು. ಅರ್ಜಿದಾರರ ಪರ ವಕೀಲರು ಸ್ಪಷ್ಟನೆ ನೀಡಿ, ಅರ್ಜಿಯಲ್ಲಿ ಹೆಚ್ಚುವರಿ ಹೆಸರುಗಳನ್ನು ಸೇರಿಸುವುದು ಸಮಸ್ಯೆಯಲ್ಲ. ಆದರೆ ನಾವು ಯಾವುದೇ ರಾಜಕೀಯ ನಾಯಕರ ವಿರುದ್ಧ ಈ ಅರ್ಜಿ ಸಲ್ಲಿಸಿಲ್ಲ. ಬದಲಿಗೆ ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ನಿಯಮ ಬಾಹಿರ ಕ್ರಮವನ್ನಷ್ಟೇ ಪ್ರಶ್ನಿಸಿದ್ದೇವೆ ಎಂದು ಮಾಹಿತಿ ನೀಡಿದರು.

ವಾದ ಆಲಿಸಿದ ಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಅಭಿಯೋಜನೆ ಇಲಾಖೆ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿತು.

ಅಲ್ಲದೆ ಸರ್ಕಾರದ ನಿಯಮ ಬಾಹಿರ ನಿರ್ಧಾರಕ್ಕೆ ಸರ್ಕಾರಿ ಅಭಿಯೋಜಕರು ಪೂರಕವಾಗಿ ಕೆಲಸ ಮಾಡಿದ್ದಾರೆ ಎಂಬ ಆರೋಪಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಸರ್ಕಾರಿ ಅಭಿಯೋಜಕರು ಇಂತಹ ಪ್ರಕರಣಗಳಲ್ಲಿ ಶಿಫಾರಸು ಮಾಡುವಾಗ ನ್ಯಾಯಾಲಯದ ಅಧಿಕಾರಿಗಳಂತೆ ಕಾರ್ಯನಿರ್ವಹಿಸಬೇಕು. ಅದು ಬಿಟ್ಟು ಪೋಸ್ಟ್ ಆಫೀಸ್ ಬಾಕ್ಸ್​​​ನಂತೆ ವರ್ತಿಸಬಾರದು ಎಂದು ಎಚ್ಚರಿಕೆ ನೀಡಿತು.

ಸರ್ಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶವನ್ನೂ ಪಬ್ಲಿಕ್ ಪ್ರಾಸಿಕ್ಯೂಟರ್​ಗಳಿಗೆ ತಲುಪಿಸಿ, ರಾಜಕೀಯ ನಾಯಕರ ವಿರುದ್ಧದ ಪ್ರಕರಣಗಳನ್ನು ಕೈಬಿಡಲು ಪ್ರಾಸಿಕ್ಯೂಷನ್ ಯಾವ ಆಧಾರದಲ್ಲಿ ಶಿಫಾರಸು ಮಾಡಿದೆ ಎಂಬುದರ ವರದಿ ತರಿಸಿಕೊಂಡು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಡಿಸೆಂಬರ್ 21ಕ್ಕೆ ಮುಂದೂಡಿತು.

ಗೃಹ ಮಂತ್ರಿ ನೇತೃತ್ವದ ಉಪ ಸಮಿತಿ ಶಿಫಾರಸಿನ ಮೇರೆಗೆ ಶಾಸಕರು, ಸಂಸದರ ವಿರುದ್ಧದ 62 ಪ್ರಕರಣಗಳನ್ನು ರಾಜ್ಯ ಸಚಿವ ಸಂಪುಟ 2020ರ ಆಗಸ್ಟ್ 31ರಂದು ಹಿಂಪಡೆದುಕೊಂಡಿತ್ತು. ಈ ನಿರ್ಧಾರ ವಿವಾದ ಸೃಷ್ಟಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.