ಬೆಂಗಳೂರು: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಕರ್ನಾಟಕ ಹೈಕೋರ್ಟ್ ಈಗಾಗಲೇ ಮಧ್ಯಂತರ ಆದೇಶ ನೀಡಿದೆ. ಇದರ ಪರಿಣಾಮ, ಮೂರು ದಿನ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮಹಾನಗರ ಪಾಲಿಕೆ ಅನುಮತಿ ನೀಡಿತ್ತು. ಇದನ್ನು ಪ್ರಶ್ನಿಸಿ ಮುಸ್ಲಿಂ ಮುಖಂಡ ಸಾಧಿಕ್ ಗುಡವಾಲಾ ಎಂಬುವವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್, ಗಣೇಶೋತ್ಸವ ಪ್ರತಿಷ್ಠಾಪನೆಗೆ ಅರ್ಜಿ ನಿರ್ಧರಿಸುವ ಅಧಿಕಾರವನ್ನು ಹುಬ್ಬಳ್ಳಿ-ಧಾರವಾಡ ಕಮಿಷನರ್ಗೆ ನೀಡಿದೆ.
ಈ ಮಧ್ಯೆ ಚಾಮರಾಜಪೇಟೆ ಈದ್ಗಾ ಮೈದಾನದ ಸುಪ್ರೀಂಕೋರ್ಟ್ ಆದೇಶ ಬಂದಿದೆ. ವಿಭಿನ್ನ ತೀರ್ಪಿನ ನೆಪವೊಡ್ಡಿ ಅರ್ಜಿದಾರರು ಮತ್ತೆ ಹೈಕೋರ್ಟ್ ಮೊರೆ ಹೋಗಿದ್ದಾರೆ. ಈ ಅರ್ಜಿ ವಿಚಾರಣೆಯನ್ನು ಇದೀಗ ನ್ಯಾ.ಅಶೋಕ್.ಎಸ್ ಕಿಣಗಿಯವರಿರುವ ಏಕಸದಸ್ಯ ಪೀಠ ನಡೆಸುತ್ತಿದೆ. ಇದೀಗ ಬಂದ ಮಾಹಿತಿಯಂತೆ ವಿಚಾರಣೆಯನ್ನು ನ್ಯಾಯಮೂರ್ತಿಗಳು 10.45ಕ್ಕೆ ಮುಂದೂಡಿದ್ದಾರೆ.
ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ : ಪಾಲಿಕೆ ಕಮಿಷನರ್ಗೆ ಅಧಿಕಾರ ನೀಡಿದ ಹೈಕೋರ್ಟ್