ETV Bharat / city

ಪೊಲೀಸರಿಗೆ ಬಾಡಿ ಕ್ಯಾಮೆರಾ ಅವಳಡಿಸಲು ಹೈಕೋರ್ಟ್ ಆದೇಶ - ಬಾಡಿವೋರ್ನ್ ಕ್ಯಾಮೆರಾ

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಕಾರ್ಯಾದೇಶ ಪ್ರಮಾಣಪತ್ರ ಸಲ್ಲಿಸಿ, ಪೊಲೀಸರಿಗೆ ಅಳವಡಿಸಲು ಒಟ್ಟು 2,860 ಬಾಡಿವೋರ್ನ್ ಕ್ಯಾಮೆರಾ ಖರೀದಿಸಲು ಕಾರ್ಯಾದೇಶ ಹೊರಡಿಸಲಾಗಿದೆ.

Karnataka highcourt on body worn camera
Karnataka highcourt on body worn camera
author img

By

Published : Feb 8, 2022, 2:17 AM IST

ಬೆಂಗಳೂರು: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಬಾಡಿವೋರ್ನ್ ಕ್ಯಾಮೆರಾಗಳನ್ನು ಅಳವಡಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿರುವ ಹೈಕೋರ್ಟ್ ಈ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿದೆ. ಭ್ರಷ್ಟಾಚಾರ ನಿಯಂತ್ರಣ ಹಾಗೂ ಮೇಲ್ವಿಚಾರಣೆಗಾಗಿ ಪೊಲೀಸ್ ಸಿಬ್ಬಂದಿಗೆ ಬಾಡಿವೋರ್ನ್ ಕ್ಯಾಮೆರಾ ಅಳವಡಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ವಕೀಲೆ ಗೀತಾಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಮ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಕಾರ್ಯಾದೇಶ ಪ್ರಮಾಣಪತ್ರ ಸಲ್ಲಿಸಿ, ಪೊಲೀಸರಿಗೆ ಅಳವಡಿಸಲು ಒಟ್ಟು 2,860 ಬಾಡಿವೋರ್ನ್ ಕ್ಯಾಮೆರಾ ಖರೀದಿಸಲು ಕಾರ್ಯಾದೇಶ ಹೊರಡಿಸಲಾಗಿದೆ. ಈಗಾಗಲೇ 1097 ಕ್ಯಾಮೆರಾಗಳನ್ನು ಒಪ್ಪಂದ ಮಾಡಿಕೊಂಡಿರುವ ಸಂಸ್ಥೆಗಳು ಪೂರೈಸಿವೆ. ಉಳಿದ ಕ್ಯಾಮೆರಾಗಳನ್ನು ಖರೀದಿಸಿ, ಸಿಬ್ಬಂದಿಗೆ ತರಬೇತಿ ನೀಡಿ ಅಳವಡಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿರಿ: ಸದ್ಯಕ್ಕಿಲ್ಲ ಸಚಿವ ಸಂಪುಟ ವಿಸ್ತರಣೆ: ಪಂಚ ರಾಜ್ಯ ಚುನಾವಣೆವರೆಗೂ ಬದಲಾವಣೆ ಬೇಡ ಎಂದ ಅಮಿತ್ ಶಾ!

ಇದೇ ವೇಳೆ ಅರ್ಜಿದಾರರ ಪರ ವಕೀಲ ಜಿ.ಆರ್ ಮೋಹನ್ ವಾದಿಸಿ, ಸರ್ಕಾರ ಹಿಂದೆಯೂ 75 ಲಕ್ಷ ರೂ. ಖರ್ಚು ಮಾಡಿ 50 ಕ್ಯಾಮೆರಾ ಖರೀದಿಸಿತ್ತು. ಒಂದನ್ನೂ ಬಳಕೆ ಮಾಡಿಲ್ಲ. ಹೀಗಾಗಿಯೇ ಪಿಐಎಲ್ ಸಲ್ಲಿಸಬೇಕಾಯಿತು. ಆದ್ದರಿಂದ, ಹಿಂದಿನ ಹಾಗೂ ಈಗ ಖರೀದಿಸುತ್ತಿರುವ ಕ್ಯಾಮೆರಾಗಳನ್ನು ಬಳಕೆ ಮಾಡುವಂತೆ ನಿರ್ದೇಶಿಸಬೇಕು ಎಂದು ಕೋರಿದರು. ವಾದ ಆಲಿಸಿದ ಪೀಠ, ಸರ್ಕಾರ ಬಾಡಿವೋರ್ನ್ ಕ್ಯಾಮೆರಾಗಳನ್ನು ಖರೀದಿಸಿದ ಬಳಿಕ ಅವುಗಳನ್ನು ಸಮರ್ಪಕವಾಗಿ ಬಳಸಲು ಪೊಲೀಸರಿಗೆ ಸೂಚಿಸಬೇಕು. ಸ್ಮಾರ್ಟ್ ಟ್ರಾಫಿಕ್ ಪೊಲೀಸ್ ವ್ಯವಸ್ಥೆ ಸುಧಾರಿಸಲು ಕ್ಯಾಮೆರಾಗಳನ್ನು ಸೂಕ್ತವಾಗಿ ಬಳಕೆ ಮಾಡಬೇಕೆಂದು ಆದೇಶಿಸಿ, ಅರ್ಜಿ ಇತ್ಯರ್ಥಪಡಿಸಿತು.

ಅರ್ಜಿದಾರರ ಕೋರಿಕೆ: ಕಾನೂನು ಸುವ್ಯವಸ್ಥೆ ಹಾಗೂ ಟ್ರಾಫಿಕ್ ಪೊಲೀಸರು ಬಾಡಿ ಕ್ಯಾಮರಾ ಧರಿಸುವುದರಿಂದ ಸಿಬ್ಬಂದಿಯ ಭ್ರಷ್ಟಾಚಾರ ನಿಯಂತ್ರಿಸಬಹುದು. ಹಿರಿಯ ಅಧಿಕಾರಿಗಳು ತಮ್ಮ ಸಿಬ್ಬಂದಿಯ ಕರ್ತವ್ಯ ನಿರ್ವಹಣೆಯನ್ನು ಠಾಣೆಯಿಂದಲೇ ಮೇಲ್ವಿಚಾರಣೆ ಮಾಡಬಹುದು. ಕಾನೂನು ಉಲ್ಲಂಘನೆ ಪ್ರಕರಣಗಳಲ್ಲಿ ಪ್ರಶ್ನಿಸಿದಾಗ ತಪ್ಪಿತಸ್ಥರೇ ಪೊಲೀಸರ ಮೇಲೆ ತಿರುಗಿ ಬಿದ್ದಿರುವ ಘಟನೆಗಳು ಸಾಕಷ್ಟಿವೆ. ಬಾಡಿ ಕ್ಯಾಮರಾ ಧರಿಸಿದರೆ ಇಂತಹ ಸಂದರ್ಭಗಳಲ್ಲಿ ಪೊಲೀಸರಿಗೂ ರಕ್ಷಣೆ ಸಿಗಲಿದೆ. ಆದ್ದರಿಂದ ಬೆಂಗಳೂರು ನಗರ ಪೊಲೀಸರಿಗಾಗಿ ಖರೀದಿಸಿರುವ 50 ಬಾಡಿ ಕ್ಯಾಮರಾ ಬಳಸುವಂತೆ ನಿರ್ದೇಶಿಸಬೇಕು. ರಾಜ್ಯಾದ್ಯಂತ ಪೊಲೀಸರ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಅನುಕೂಲವಾಗುವಂತೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಾಡಿ ಕ್ಯಾಮರಾ ಖರೀದಿಸಲು ಮತ್ತು ಪೊಲೀಸರಿಗೆ ಅಳವಡಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.