ETV Bharat / city

ಕೋವಿಡ್‌ ರೋಗಿಗಳಿಂದ ದುಬಾರಿ ಶುಲ್ಕ ವಸೂಲಿ: ಆಸ್ಪತ್ರೆಗಳ ವಿರುದ್ಧ ದೂರು ದಾಖಲಿಸಲು ಹೈಕೋರ್ಟ್ ಆದೇಶ - ಹೈಕೋರ್ಟ್ ಆದೇಶ

ಸರ್ಕಾರ ನಿಗದಿಪಡಿಸಿರುವ ಶುಲ್ಕ ಹೊರತುಪಡಿಸಿ ಹೆಚ್ಚಿನ ಶುಲ್ಕವನ್ನು ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ವಿಧಿಸುವಂತಿಲ್ಲ. ಯಾವುದಾದರೂ ಆಸ್ಪತ್ರೆಯು ಸರ್ಕಾರ ನಿಗದಿಪಡಿಸಿರುವ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ವಿಧಿಸಿದರೆ ಅಂತಹ ಆಸ್ಪತ್ರೆಯ ವಿರುದ್ಧ ಕಠಿಣ ಕ್ರಮಕ್ಕೆ ಹೈಕೋರ್ಟ್​ ಆದೇಶ ನೀಡಿದೆ.

Karnataka highcourt
Karnataka highcourt
author img

By

Published : Oct 26, 2021, 12:04 AM IST

ಬೆಂಗಳೂರು : ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡಲು ಹೆಚ್ಚಿನ ಶುಲ್ಕ ಪಡೆದ ಆಸ್ಪತ್ರೆಗಳ ವಿರುದ್ಧ ಸಾರ್ವಜನಿಕರು ದೂರು ದಾಖಲಿಸಲು ಅನುಕೂಲವಾಗುವಂತೆ ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡುವಂತೆ ಹಾಗೂ ಬಿಬಿಎಂಪಿ ವೆಬ್‌ಸೈಟ್​ನಲ್ಲಿ ಪ್ರಕಟಿಸಬೇಕೆಂದು ಹೈಕೋರ್ಟ್ ನಿರ್ದೇಶಿಸಿದೆ.

ಕೋವಿಡ್‌ ನಿರ್ವಹಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ವಿವಿಧ ಪಿಐಎಲ್ ಅರ್ಜಿಗಳನ್ನು ಸಿಜೆ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ಪೀಠ, ಈ ಹಿಂದೆ ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡಲು ದುಬಾರಿ ಶುಲ್ಕ ವಿಧಿಸಿದ್ದ ಆಸ್ಪತ್ರೆಗಳ ವಿರುದ್ದ ಯಾವ ಕ್ರಮಕೈಗೊಳ್ಳಲಾಗಿದೆ ಎಂಬುದನ್ನು ತಿಳಿಸಬೇಕು. ಖಾಸಗಿ ಆಸ್ಪತ್ರೆಗಳು ಹೆಚ್ಚುವರಿಯಾಗಿ ಪಡೆದ ಹಣವನ್ನು ರೋಗಿಗಳಿಗೆ ಮರಳಿಸಿರುವ ಕುರಿತೂ ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡಬೇಕು ಎಂದು ಪೀಠ ರಾಜ್ಯ ಸರ್ಕಾರ ಮತ್ತು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ನಿರ್ದೇಶಿಸಿತು.

ಹೆಚ್ಚುವರಿ ಶುಲ್ಕ ವಾಪಸ್ ಮಾಡಿದ ಆಸ್ಪತ್ರೆಗಳು

ಇದೇ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಕೋವಿಡ್‌ ರೋಗಿಗಳಿಂದ ಹೆಚ್ಚು ಹಣ ಸಂಗ್ರಹಿಸಿದ ಆಸ್ಪತ್ರೆಗಳ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಹಾಗೆಯೇ, ಖಾಸಗಿ ಆಸ್ಪತ್ರೆಗಳು ಸರ್ಕಾರ ಶಿಫಾರಸ್ಸು ಮಾಡಿದ್ದ ರೋಗಿಗಳಿಂದ 1,98,83,498 ರೂಪಾಯಿಯನ್ನು ಹೆಚ್ಚುವರಿಯಾಗಿ ಸಂಗ್ರಹಿಸಿದ್ದು, ಈವರೆಗೆ 32,22,352 ರೂಪಾಯಿಗಳನ್ನು ವಾಪಸ್ಸು ಮಾಡಿವೆ. ಅದೇ ರೀತಿ ಖಾಸಗಿ ಕೋವಿಡ್‌ ರೋಗಿಗಳಿಂದ 1,55,91,845 ರೂಪಾಯಿ ಸಂಗ್ರಹಿಸಿದ್ದು, ಈವರೆಗೆ 10,42,339 ರೂಪಾಯಿ ಹಿಂಪಾವತಿಸಿವೆ. ಖಾಸಗಿ ಆಸ್ಪತ್ರೆಗಳು ಹೆಚ್ಚಿಗೆ ಹಣ ವಸೂಲು ಮಾಡಿರುವ ಬಗ್ಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಸಹಾಯವಾಣಿಗೆ 1,325 ದೂರು ಬಂದಿವೆ ಎಂದು ತಿಳಿಸಿದರು.

ವಲಸೆ ಕಾರ್ಮಿಕರಿಗೂ ಚಿಕಿತ್ಸೆ

ಕೋವಿಡ್‌ ಸೋಂಕು ತಗುಲಿದರೆ ಬಿಬಿಎಂಪಿಯು ಬಿಯು ಸಂಖ್ಯೆಯನ್ನು ಬಿಡುಗಡೆ ಮಾಡುತ್ತದೆ. ಬಿಯು ನಂಬರ್‌ ಆಧರಿಸಿ ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಯಲ್ಲಿ ಬೆಡ್‌ ಹಂಚಿಕೆ ಮಾಡಲಾಗುತ್ತದೆ. ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಯಲ್ಲಿ ಪಡೆಯುವ ಚಿಕಿತ್ಸೆ, ಸರ್ಕಾರ ಪೂರೈಸುವ ರೆಮ್‌ಡಿಸಿವಿರ್‌ ಇಂಜೆಕ್ಷನ್‌ ಸೇರಿದಂತೆ ಎಲ್ಲವೂ ಸಂಪೂರ್ಣ ಉಚಿತವಾಗಿರುತ್ತದೆ. ರೋಗಿಯು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿರುವುದಿಲ್ಲ. ಇದು ಬಡತನ ರೇಖೆಗಿಂತ ಕೆಳಗಿರುವವರು, ಎಪಿಎಲ್‌ ಕಾರ್ಡ್‌ ಹೊಂದಿರುವವರು, ವಲಸೆ ಕಾರ್ಮಿಕರು, ಅಂತರರಾಜ್ಯಗಳಿಂದ ಮರಳಿರುವ ಎಲ್ಲರಿಗೂ ಇದು ಅನ್ವಯಿಸುತ್ತದೆ ಎಂದು ಸರ್ಕಾರ ತಿಳಿಸಿದೆ.

ಖಾಸಗಿ ಚಿಕಿತ್ಸಾ ವೆಚ್ಚದ ವಿವರ

ಖಾಸಗಿ ಆಸ್ಪತ್ರೆಯಲ್ಲಿ ರೋಗಿಯು ಖಾಸಗಿಯಾಗಿ ಚಿಕಿತ್ಸೆ ಪಡೆದರೆ ಸರ್ಕಾರ ನಿಗದಿಪಡಿಸಿದ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ದಿನಕ್ಕೆ ಸಾಮಾನ್ಯ ವಾರ್ಡ್‌ಗೆ ಹತ್ತು ಸಾವಿರ, ವೆಂಟಿಲೇಟರ್‌ ಇಲ್ಲದ ಐಸಿಯುಗೆ ಹದಿನೈದು ಸಾವಿರ, ಎಚ್‌ಡಿಯುಗೆ ಹನ್ನೆರಡು ಸಾವಿರ, ವೆಂಟಿಲೇಟರ್‌ ಒಳಗೊಂಡ ಐಸಿಯುಗೆ ಇಪ್ಪತ್ತೈದು ಸಾವಿರ ರೂಪಾಯಿ ಪಾವತಿಸಬೇಕು ಎಂದು ಹೇಳಿದೆ.

ದೂರು ನೀಡಲು ಸಹಾಯವಾಣಿ

ಸರ್ಕಾರ ನಿಗದಿಪಡಿಸಿರುವ ಶುಲ್ಕ ಹೊರತುಪಡಿಸಿ ಹೆಚ್ಚಿನ ಶುಲ್ಕವನ್ನು ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ವಿಧಿಸುವಂತಿಲ್ಲ. ಯಾವುದಾದರೂ ಆಸ್ಪತ್ರೆಯು ಸರ್ಕಾರ ನಿಗದಿಪಡಿಸಿರುವ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ವಿಧಿಸಿದರೆ ಅಂತಹ ಆಸ್ಪತ್ರೆಯ ವಿರುದ್ಧ ಕೆಪಿಎಂಇ ಕಾಯಿದೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯಿದೆ ಅಡಿ ಕ್ರಮಕೈಗೊಳ್ಳಲಾಗುತ್ತದೆ. ಖಾಸಗಿ ಆಸ್ಪತ್ರೆಯು ರೋಗಿಗೆ ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಥವಾ ಸರ್ಕಾರ ನಿಗದಿಪಡಿಸಿರುವ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ವಿಧಿಸಿದರೆ ಸಹಾಯವಾಣಿ ಸಂಖ್ಯೆ 1800 425 8330 ಕರೆ ಮಾಡಿ ದೂರು ನೀಡಬಹುದಾಗಿದೆ ಎಂದು ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.