ಬೆಂಗಳೂರು: ರಾಜ್ಯದಲ್ಲಿ ಹೊಸ 107 ಒಮಿಕ್ರಾನ್ ಕೇಸ್ಗಳು ಪತ್ತೆಯಾಗುವ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 333ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ 876, ದೆಹಲಿಯಲ್ಲಿ 465 ಪ್ರಕರಣಗಳು ಇದ್ದು ಕರ್ನಾಟಕ ಗರಿಷ್ಠ ಒಮಿಕ್ರಾನ್ ಪ್ರಕರಣವಿರುವ ರಾಜ್ಯಗಳ ಪೈಕಿ ಮೂರನೇ ಸ್ಥಾನದಲ್ಲಿದೆ.
ರಾಜ್ಯವಾರು ಒಮಿಕ್ರಾನ್ ಪ್ರಕರಣಗಳ ಪಟ್ಟಿಯಲ್ಲಿ ಈ ಮಾಹಿತಿ ಇದ್ದು, ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ರಾಜ್ಯದ 333 ಪ್ರಕರಣಗಳ ಪೈಕಿ 26 ಮಂದಿ ಈಗಾಗಲೇ ಗುಣಮುಖರಾಗಿದ್ದಾರೆ.
ಇದನ್ನೂ ಓದಿ: ಕೋವಿಡ್ ಭೀತಿ : ಭಕ್ತರಿಗಿಲ್ಲ ಮಾದಪ್ಪನ ದರ್ಶನ, ಬಿಳಿಗಿರಿ ರಂಗನ ಜಾತ್ರೆಗೂ ಬ್ರೇಕ್
ಇಂದು ಕೋವಿಡ್ ನಿಯಂತ್ರಣದ ಬಗ್ಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಬಿಬಿಎಂಪಿ ಹಿರಿಯ ಅಧಿಕಾರಿಗಳು, ತಜ್ಞರು, ಆರೋಗ್ಯ ಮತ್ತು ವೈದ್ಯಕೀಯ ವಿಭಾಗದ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಲಿದ್ದಾರೆ. ಕೋವಿಡ್ ಟೆಸ್ಟಿಂಗ್, ಕೌನ್ಸೆಲಿಂಗ್, ಪರಿಶೀಲನೆ, ಆರೋಗ್ಯ ಸಂಬಂಧಿತ ಮೊಬೈಲ್ ಆ್ಯಪ್ಗಳ ಬಳಕೆ ಹಾಗೂ ವಿವಿಧ ಇಲಾಖೆಗಳ ಜೊತೆ ಸಮನ್ವಯದೊಂದಿಗೆ ಕೆಲಸ ಮಾಡುವ ಬಗ್ಗೆ ವಿಧಾನಸೌಧದಲ್ಲಿ ಸಭೆ ನಡೆಸಲಿದ್ದಾರೆ.