ETV Bharat / city

ಸಹೋದರ ಲಖನ್‌ರಿಗೆ ತಪ್ಪಿದ ಟಿಕೆಟ್ : ಸಿಎಂ ಎದುರು ರಮೇಶ್ ಜಾರಕಿಹೊಳಿ ಅಸಮಾಧಾನ! - ಪರರಿಷತ್ ಚುನಾವಣೆಗೆ ಟಿಕೆಟ್ ಘೋಷಣೆ

ಲಖನ್ ಜಾರಕಿಹೊಳಿ ಅವರಿಗೆ ವಿಧಾನ ಪರಿಷತ್ ಚುನಾವಣೆ (Karnataka Legislative Council Election) ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸಿಎಂ ಅವರನ್ನು ಭೇಟಿ ಮಾಡಿ ಚರ್ಚಿಸಿದರು..

ramesh jarakiholi meets cm bommai
ramesh jarakiholi meets cm bommai
author img

By

Published : Nov 21, 2021, 4:03 PM IST

ಬೆಂಗಳೂರು : ವಿಧಾನ ಪರಿಷತ್ ಚುನಾವಣೆಗೆ (Karnataka Legislative Council Election) ಬೆಳಗಾವಿಯಿಂದ ಲಖನ್ ಜಾರಕಿಹೊಳಿ ಅವರಿಗೆ ಟಿಕೆಟ್ ತಪ್ಪಿದ ಹಿನ್ನೆಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು (Ramesh Jarkiholi) ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ಆರ್.ಟಿ.ನಗರದ ಸಿಎಂ ಬೊಮ್ಮಾಯಿ (CM Basavaraj Bommai) ನಿವಾಸಕ್ಕೆ ಆಗಮಿಸಿದ ರಮೇಶ್ ಜಾರಕಿಹೊಳಿ, ಸಹೋದರನಿಗೆ ಪರಿಷತ್ ಟಿಕೆಟ್ ಕೈತಪ್ಪಿರುವುದಕ್ಕೆ ಸಿಎಂ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ ಲಖನ್ ಜಾರಕಿಹೊಳಿ ಅವರಿಗೆ ಟಿಕೆಟ್ ಕೊಡುವ ಆಶ್ವಾಸನೆ ನೀಡಿದ್ದ ಬಿಜೆಪಿ ವರಿಷ್ಠರು, ಈಗ ಯೂಟರ್ನ್ ಹೊಡೆದಿರುವುದು ಜಾರಕಿಹೊಳಿ ಸಹೋದರರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಎರಡು ಕ್ಷೇತ್ರಗಳು ಬರುವುದರಿಂದ ಒಂದು ಕಡೆ ಲಖನ್‍ ಜಾರಕಿಹೊಳಿ ಅವರಿಗೆ ಟಿಕೆಟ್ ಕೊಡಿಸಲು ಕಳೆದ ಎರಡು ತಿಂಗಳಿಂದ ರಮೇಶ್ ಜಾರಕಿಹೊಳಿ ಭಾರಿ ಪ್ರಯತ್ನಪಟ್ಟಿದ್ದರು.

ಮುಖ್ಯಮಂತ್ರಿಗಳ ಭೇಟಿ ನಂತರ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಬೇಸರದಲ್ಲಿ ರಮೇಶ್ ಜಾರಕಿಹೊಳಿ ತೆರಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.