ETV Bharat / city

ಫೆ. 14 ರಿಂದ ಅಧಿವೇಶನ: ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ಕಮಲ್ ಪಂತ್​​ ಆದೇಶ

author img

By

Published : Feb 11, 2022, 12:22 AM IST

ವಿಧಾನಮಂಡಲದ ಜಂಟಿ ಅಧಿವೇಶನ ಫೆ. 14 ರಿಂದ 25ರವರೆಗೆ ನಡೆಯಲಿದ್ದು, ಈ ವೇಳೆ ವಿಧಾನಸೌಧದ ಸುತ್ತಮುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

Section 144 in Bengaluru from 14th feb
Section 144 in Bengaluru from 14th feb

ಬೆಂಗಳೂರು: ಫೆಬ್ರವರಿ 14 ರಿಂದ 25ರವರೆಗೆ ವಿಧಾನಮಂಡಲದ ಅಧಿವೇಶನ ನಡೆಯಲಿರುವ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ.

ಅಧಿವೇಶನದ ಸಮಯದಲ್ಲಿ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ತಮ್ಮ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟನೆ, ಧರಣಿ, ಸತ್ಯಾಗ್ರಹ, ವಿಧಾನಸೌಧ ಮುತ್ತಿಗೆ ಹಾಕಿ ಕಾರ್ಯಕಲಾಪಗಳಿಗೆ ಅಡಚಣೆ ಮಾಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಸೂಕ್ತ ಬಂದೋಬಸ್ತ್ ನಿಯೋಜಿಸಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ವಿಧಾನಸೌಧದ ಎರಡು ಕಿಲೋ ಮೀಟರ್​ ಸುತ್ತಮುತ್ತ 12 ದಿನಗಳ ಕಾಲ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12ರವರೆಗೆ ಸೆಕ್ಷನ್ 144 ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿರಿ: ಪ್ರೇಮಿಗಳ ದಿನಕ್ಕೆ ಕೆಲ ದಿನ ಬಾಕಿ... ಮರಕ್ಕೆ ನೇಣು ಬಿಗಿದು ಯುವ ಜೋಡಿ ಆತ್ಮಹತ್ಯೆ!

ನಿಷೇಧಾಜ್ಞೆ ಜಾರಿಯಲ್ಲಿರುವ ಸ್ಥಳದಲ್ಲಿ ಐದಕ್ಕಿಂತ ಹೆಚ್ಚು ಮಂದಿ ಗುಂಪುಗೂಡುವುದು, ಮೆರವಣಿಗೆ, ಸಭೆ ನಡೆಸುವಂತಿಲ್ಲ. ಯಾವುದೇ ಕಾರಣಕ್ಕೂ ಶಸ್ತ್ರಾಸ್ತ್ರ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವಂತಿಲ್ಲ ಎಂದು ಆದೇಶದಲ್ಲಿ ಪಂತ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.