ಬೆಂಗಳೂರು: ರಾಜ್ಯ ಸಚಿವ ಸಂಪುಟ ದರ್ಜೆಯ ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸಲು ಆದೇಶಿಸಲಾಗಿದೆ.
ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್-19 ವೈರಾಣುವಿನ ನಿಯಂತ್ರಣಕ್ಕೆ ಅನುಕೂಲವಾಗುವಂತೆ ರಾಜ್ಯ ಸಚಿವ ಸಂಪುಟದ ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸಲು ಸೂಕ್ತ ಆದೇಶವನ್ನು ಹೊರಡಿಸಿ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸೂಚಿಸಿದ್ದರು.
ರಾಜ್ಯದಲ್ಲಿ ವ್ಯಾಪಕವಾಗಿ ಹರಡಿರುವ ಕೋವಿಡ್-19 ವೈರಾಣುವಿನ ನಿಯಂತ್ರಣಕ್ಕೆ ಅನುಕೂಲವಾಗುವಂತೆ ರಾಜ್ಯ ಸಚಿವ ಸಂಪುಟದ ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು (ದಿನಾಂಕ: 01.05.2021ರಿಂದ ಅನ್ವಯವಾಗುವಂತೆ) ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸಲು ಸರ್ಕಾರ ಆದೇಶಿಸಿದೆ.
ಇದನ್ನೂ ಓದಿ - ಕೋವಿಡ್ ಪರಿಹಾರ ನಿಧಿಗೆ ಸಚಿವರು, ಶಾಸಕರ ವೇತನ ದೇಣಿಗೆ ನೀಡಲು ನಿರ್ಧಾರ