ಬೆಂಗಳೂರು: ರಾಜ್ಯದ ಎರಡು ಶಿಕ್ಷಕರ ಕ್ಷೇತ್ರ ಮತ್ತು ಎರಡು ಪದವೀಧರರ ಕ್ಷೇತ್ರದ ಚುನಾವಣೆಗೆ ಮತದಾನ ಆರಂಭಗೊಂಡಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರ, ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಉತ್ತಮ ಮತದಾನ ನಡೆಯುತ್ತಿದ್ದು, ವಾಯುವ್ಯ ಪದವೀಧರ, ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ಮಂದಗತಿಯಲ್ಲಿ ಮತದಾನ ನಡೆಯುತ್ತದೆ.
ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಗಳಿಗೆ ಇಂದು ಬೆಳಗ್ಗೆ 8 ಗಂಟೆಯಿಂದ ಮತದಾನ ಆರಂಭಗೊಂಡಿದೆ. ಮತಗಟ್ಟೆಯಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಮತದಾನ ಪ್ರಕ್ರಿಯೆ ನಡೆಸಲಾಗುತ್ತಿದೆ. ಬೆಳಗ್ಗೆ ಚುರುಕಿನಿಂದ ಆರಂಭಗೊಂಡ ಮತದಾನ ಪ್ರಕ್ರಿಯೆ 10 ಗಂಟೆ ನಂತರ ಮಂದಗತಿಯಲ್ಲಿ ಸಾಗಿದೆ.
ಬೆಳಗ್ಗೆ 12 ಗಂಟೆ ವರೆಗಿನ ಮತದಾನದ ಪ್ರಮಾಣ:
- ವಾಯವ್ಯ ಪದವೀಧರರ ಕ್ಷೇತ್ರ: 24.09
- ದಕ್ಷಿಣ ಪದವೀಧರರ ಕ್ಷೇತ್ರ: 21.17
- ವಾಯವ್ಯ ಶಿಕ್ಷಕರ ಕ್ಷೇತ್ರ: 33.56
- ಪಶ್ಚಿಮ ಶಿಕ್ಷಕರ ಕ್ಷೇತ್ರ: 38.86
ಇದನ್ನೂ ಓದಿ: ಮತದಾನಕ್ಕೆ ಸಾಲಿನಲ್ಲಿ ನಿಂತಿದ್ದ ಜನ: ತಾವೇ ಡೆಸ್ಕ್ ತಂದಿಟ್ಟು ಸರಳತೆ ಮೆರೆದ ಬೆಳಗಾವಿ ಡಿಸಿ