ETV Bharat / city

ಲಾಕ್​ಡೌನ್ ವಿಸ್ತರಣೆ ಮತ್ತು ಆರ್ಥಿಕ ಪ್ಯಾಕೇಜ್ ಬಗ್ಗೆ ಶೀಘ್ರದಲ್ಲೇ ತೀರ್ಮಾನ: ಸಿಎಂ

ಕೋವಿಡ್​ ನಿಯಂತ್ರಣಕ್ಕೆ ಮೇ 24ರ ನಂತರ ಲಾಕ್​ಡೌನ್ ವಿಸ್ತರಣೆ ಮಾಡುವುದು ಬಹುತೇಕ ಖಚಿತ ಎಂಬ ದಾಟಿಯಲ್ಲಿ ಸಿಎಂ ಬಿಎಸ್​ವೈ ಮಾತನಾಡಿದ್ದಾರೆ.

karnataka-mulls-over-lockdown-extension-ani
ಲಾಕ್​ಡೌನ್ ವಿಸ್ತರಣೆ ಮತ್ತು ಆರ್ಥಿಕ ಪ್ಯಾಕೇಜ್ ಬಗ್ಗೆ ಶೀಘ್ರದಲ್ಲೇ ತೀರ್ಮಾನ: ಸಿಎಂ
author img

By

Published : May 18, 2021, 5:46 AM IST

ಬೆಂಗಳೂರು: ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಗ್ರಾಮೀಣ ಭಾಗದಲ್ಲಿ ಕೋವಿಡ್​ ಹಾವಳಿ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಲಾಕ್​ಡೌನ್ ವಿಸ್ತರಣೆ ಮಾಡುವ ಬಗ್ಗೆ ಸಚಿವರ ಜೊತೆಗೆ ಸಭೆ ನಡೆಸಿದ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಸಿಎಂ ಬಿಎಸ್​ವೈ ಸ್ಪಷ್ಟನೆ ನೀಡಿದ್ದಾರೆ.

ಸೋಮವಾರ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳ ಜತೆ ಕೋವಿಡ್‌ ಕುರಿತಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಬಿಎಸ್​ವೈ ವಿಶೇಷ ಆರ್ಥಿಕ ಪ್ಯಾಕೇಜ್​ ಬಗ್ಗೆಯೂ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ; ವರ್ಷದ ಹಿಂದೆ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ ಪತ್ತೆಯಾಯ್ತು ಕಂತೆ ಕಂತೆ ನೋಟು..!

ಈ ಹೇಳಿಕೆಯ ಬೆನ್ನಲ್ಲೇ ಮೇ 24ರ ನಂತರ ಲಾಕ್​ಡೌನ್ ವಿಸ್ತರಣೆಯಾಗುವ ಸಾಧ್ಯತೆ ಬಹುತೇಕ ದಟ್ಟವಾಗಿದೆ ಎಂದು ಹೇಳಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕೆಂದು, ಕೋವಿಡ್ ಟೆಸ್ಟ್ ಮಾಡಿಸಿದರೆ 24 ಗಂಟೆಯಲ್ಲಿ ಪರೀಕ್ಷಾ ವರದಿ ನೀಡಬೇಕೆಂದು ಸಿಎಂ ಸೂಚನೆ ನೀಡಿದ್ದಾರೆ.

ಮೇ 24 ರ ಬಳಿಕ ಲಾಕ್‌ಡೌನ್‌ ವಿಸ್ತರಿಸುವ ಮತ್ತು ವಿಶೇಷ ಆರ್ಥಿಕ ಪ್ಯಾಕೇಜ್‌ ನೀಡುವ ಸಂಬಂಧ ಸಚಿವರ ಜತೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.