ETV Bharat / city

ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್​ ಬುಟ್ಟಿಗೆ 'ಕೈ' ಹಾಕಿದ ಕಾಂಗ್ರೆಸ್​​? - Opposition leader Siddaramaiah

ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆ ವೇಳೆಗೆ ಹಳೇ ಮೈಸೂರು ಭಾಗದಲ್ಲಿ ಮತ್ತೆ ಪ್ರಾಬಲ್ಯ ಸಾಧಿಸಲು ಕಾಂಗ್ರೆಸ್ ಸಿದ್ಧತೆ ಆರಂಭಿಸಿದ್ದು, ಜೆಡಿಎಸ್ ಜನಪ್ರಿಯ ಮುಖಂಡರಿಗೆ ಗಾಳ ಹಾಕಲು ಮುಂದಾಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

karnataka-political-development
ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಬುಟ್ಟಿಗೆ 'ಕೈ' ಹಾಕಲಿದೆ ಕಾಂಗ್ರೆಸ್...
author img

By

Published : Feb 22, 2020, 8:32 PM IST

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆ ವೇಳೆಗೆ ಹಳೇ ಮೈಸೂರು ಭಾಗದಲ್ಲಿ ಮತ್ತೆ ಪ್ರಾಬಲ್ಯ ಸಾಧಿಸಲು ಕಾಂಗ್ರೆಸ್ ಸಿದ್ಧತೆ ಆರಂಭಿಸಿದ್ದು, ಜೆಡಿಎಸ್ ಜನಪ್ರಿಯ ಮುಖಂಡರಿಗೆ ಗಾಳ ಹಾಕಲು ಮುಂದಾಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಈಗಾಗಲೇ ಜೆಡಿಎಸ್​ನಿಂದ ಸಾಕಷ್ಟು ಹಿರಿಯ ನಾಯಕರು ಕಾಂಗ್ರೆಸ್-ಬಿಜೆಪಿಯತ್ತ ಮುಖ ಮಾಡಿದ್ದಾರೆ. ಈ ಬೆಳವಣಿಗೆಯಿಂದ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬಲಗೊಳ್ಳಬಹುದು ಇಲ್ಲವೇ ತಮಗಿರುವ ನೆಲೆಯನ್ನು ಜೆಡಿಎಸ್ ಇಲ್ಲವೇ ಬಿಜೆಪಿ ಕಿತ್ತುಕೊಳ್ಳಬಹುದು ಎಂಬ ಆತಂಕದಲ್ಲಿರುವ ರಾಜ್ಯ ಕಾಂಗ್ರೆಸ್ ನಾಯಕರು, ಜೆಡಿಎಸ್ ನಾಯಕರನ್ನು ಸೆಳೆಯುವ ಕಾರ್ಯಕ್ಕೆ ಮುಂದಾಗಿದ್ದಾರೆ. ಬಿಜೆಪಿ ಅಧಿಕಾರದಲ್ಲಿರುವ ಹಿನ್ನೆಲೆ ಅಲ್ಲಿಂದ ಮುಖಂಡರನ್ನು ಸೆಳೆಯುವುದು ಕಷ್ಟ. ಆದ್ದರಿಂದ ಜೆಡಿಎಸ್ ಮುಖಂಡರತ್ತ ರಾಜ್ಯ ಕಾಂಗ್ರೆಸ್ ನಾಯಕರು ಕಣ್ಣು ಹಾಕಿದ್ದಾರೆ ಎನ್ನಲಾಗುತ್ತಿದೆ.

ಯಾರ್ಯಾರ ನಾಯಕತ್ವ!

ಈಗಾಗಲೇ ಮಾಜಿ ಸಚಿವರಾದ ಚೆಲುವರಾಯಸ್ವಾಮಿ, ಮಾಗಡಿ ಬಾಲಕೃಷ್ಣ, ರಮೇಶ್ ಬಂಡಿಸಿದ್ದೇಗೌಡ ಮತ್ತಿತರರು ಜೆಡಿಎಸ್ ತೊರೆದು ಕಾಂಗ್ರೆಸ್​​ಗೆ ಬಂದಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿರುವ, ಜೆಡಿಎಸ್ ಪಕ್ಷ ತೊರೆಯಲು ಮುಂದಾಗಿರುವ ಮುಖಂಡರನ್ನು ಸಂಪರ್ಕಿಸಲು ಸೂಚಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯಗೆ ಹಳೇ ಮೈಸೂರು ಭಾಗದ ಹೆಚ್ಚಿನ ಜೆಡಿಎಸ್ ನಾಯಕರನ್ನು ಸೆಳೆಯುವ ಜವಾಬ್ದಾರಿ ನೀಡಲಾಗಿದೆ. ಇವರು ಈಗಾಗಲೇ ಇಲ್ಲಿನ ಕಾಂಗ್ರೆಸ್ ನಾಯಕರ ಜತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಚುನಾವಣೆಗೆ ಒಂದು ವರ್ಷ ಮುನ್ನವೇ ಜೆಡಿಎಸ್​​ನಿಂದ ನಾಯಕರನ್ನು ಕರೆತಂದು ಕ್ಷೇತ್ರಗಳನ್ನು ಗುರುತಿಸಿ, ಅವರನ್ನು ಜನರಿಗೆ ಪರಿಚಯಿಸುವ ಕಾರ್ಯ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

ಕೆಲವರಿಗೆ ಗಾಳ

ಈಗಾಗಲೇ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಪ್ರಭಾವಿ ಜೆಡಿಎಸ್ ಹಿರಿಯ ನಾಯಕರನ್ನು ಕಾಂಗ್ರೆಸ್ ಪಕ್ಷದ ನಾಯಕರು ಭೇಟಿಯಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ. ಇನ್ನು ಕೆಲ ಶಾಸಕರು ಪಕ್ಷದ ಬಗ್ಗೆ ಅಷ್ಟೇನು ಪ್ರೀತಿ ಹೊಂದಿಲ್ಲ ಎಂಬ ಕಾರಣದಿಂದ ಸಂಪರ್ಕಿಸುವ ಯತ್ನ ನಡೆದಿತ್ತಾದರೂ ಮೊದಲ ಹಂತದ ಪ್ರಯತ್ನದಲ್ಲಿ ಇವರು ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎನ್ನಲಾಗುತ್ತಿದೆ. ಮುಂದಿನ ದಿನಗಳಲ್ಲಿ ಖುದ್ದು ಸಿದ್ದರಾಮಯ್ಯ ಅವರೇ ಸಂಪರ್ಕಿಸುವ ಸಾಧ್ಯತೆ ಇದೆಯಂತೆ.

ಒಂದೆಡೆ ಬಿಜೆಪಿ ಹಳೇ ಮೈಸೂರು ಭಾಗದತ್ತ ಕಣ್ಣು ಹಾಕಿಸಿದ್ದರೆ, ಇನ್ನೊಂದೆಡೆ ಕಾಂಗ್ರೆಸ್ ಕೂಡ ಜೆಡಿಎಸ್ ಬುಟ್ಟಿಗೆ ಕೈ ಹಾಕಲು ಮುಂದಾಗಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ಜವಾಬ್ದಾರಿ ಮಾಜಿ ಸಚಿವ ಜಮೀರ್ ಅಹಮದ್​​ಗೆ ವಹಿಸಲಾಗಿದೆ. ಇನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಲ ಭಾಗ ಹಾಗೂ ರಾಮನಗರ ಜಿಲ್ಲೆಯ ಹೊಣೆಯನ್ನು ಮಾಜಿ ಸಚಿವ ಡಿ.ಕೆ.ಶಿವಕುಮಾರ್​​​ಗೆ ವಹಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಒಟ್ಟಾರೆ ಕೆಪಿಸಿಸಿ ಅಧ್ಯಕ್ಷರ ನೇಮಕ ಇನ್ನೂ ಆಗಿಲ್ಲ. ಆಗುತ್ತಿದ್ದಂತೆ ಅಧ್ಯಕ್ಷರ ನೇತೃತ್ವದಲ್ಲಿ ಇನ್ನೊಮ್ಮೆ ಸಭೆ ಸೇರಿ, ಯಾರಿಗೆ ನಾಯಕತ್ವ ನೀಡಬೇಕೆಂದು ಚರ್ಚಿಸಿ ಮುಂದಿನ ಮಾತಕತೆ ನಡೆಸಲು ರಾಜ್ಯ ಕಾಂಗ್ರೆಸ್ ನಾಯಕರು ಸಿದ್ಧತೆ ನಡೆಸದ್ದಾರೆ. ಕೆಲ ಜೆಡಿಎಸ್ ನಾಯಕರೇ ಖುದ್ದು ಕಾಂಗ್ರೆಸ್ ನಾಯಕರನ್ನು ಸಂಪರ್ಕಿಸಿದ್ದು, ಮುಂದಿನ ಚುನಾವಣೆ ವೇಳೆಗೆ ಪಕ್ಷಕ್ಕೆ ಬರುವುದಾಗಿ ಕೈ ನಾಯಕರಿಗೆ ಮನವಿ ಮಾಡಿದ್ದಾರಂತೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.