ಬೆಂಗಳೂರು: ರಾಜ್ಯದಲ್ಲಿ ನಿಧಾನಗತಿಯಲ್ಲಿ ಕೋವಿಡ್ ಸೋಂಕು ಏರಿಕೆಯಾಗುತ್ತಿದೆ. ಇಂದು 32,685 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 2,130 ಮಂದಿಗೆ ಸೋಂಕು ದೃಢಪಟ್ಟಿದೆ. ಇಂದು 1,395 ಮಂದಿ ಡಿಸ್ಜಾರ್ಜ್ ಆಗಿದ್ದು, ಒಟ್ಟು 39,53, 776 ಮಂದಿ ಗುಣಮುಖರಾಗಿದ್ದಾರೆ.
ಇಂದು ಕೋವಿಡ್ಗೆ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 9,866 ಕ್ಕೆ ಏರಿಕೆಯಾಗಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ. 6.51 ರಷ್ಟಿದ್ದರೆ, ವಾರದ ಸೋಂಕಿತರ ಪ್ರಮಾಣ ಶೇ. 5.80 ರಷ್ಟಿದೆ. ಇಲ್ಲಿಯವರೆಗೂ ಪರಿಕ್ಷೀಸಲಾದ ಒಟ್ಟು ಸಂಖ್ಯೆ 6,77,36,222. ವಾರದ ಸಾವಿನ ಪ್ರಮಾಣ ಶೇ. 0.09 ರಷ್ಟಿದೆ.
ವಿಮಾನ ನಿಲ್ದಾಣದಿಂದ ಇಂದು ತಪಾಸಣೆಗೆ 3,832 ಒಳಗಾಗಿದ್ದು, ಇದುವರೆಗೂ 12,92,345 ಪ್ರಯಾಣಿಕರು ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು 1,615 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 18,33,572 ಕ್ಕೆ ಏರಿಕೆ ಆಗಿದೆ.
ಇಂದು 1,077 ಮಂದಿ ಬಿಡುಗಡೆಯಾಗಿದ್ದು, ಇದುವರೆಗೂ 18,08,574 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. ಇಂದು ಬೆಂಗಳೂರಿನಲ್ಲಿ ಕೋವಿಡ್ ಗೆ ಒಬ್ಬರು ಮೃತಪಟ್ಟಿದ್ದಾರೆ. ಇನ್ನು ಸಕ್ರಿಯ ಪ್ರಕರಣಗಳು 8,023 ಇದೆ. ಇದುವರೆಗೂ ಕೋವಿಡ್ ಸಾವಿನ ಸಂಖ್ಯೆ 16,974 ರಷ್ಟಿದೆ.
ಇದನ್ನೂ ಓದಿ : ಇದೆಂಥಾ ಅಚ್ಚರಿ..!! ಸತ್ತಿದ್ದಾನೆ ಎಂದು ತಿಳಿದು ಅಂತ್ಯಸಂಸ್ಕಾರವನ್ನೂ ಮಾಡಿದ್ದ ವ್ಯಕ್ತಿ ದಿಢೀರ್ ಪ್ರತ್ಯಕ್ಷ!