ETV Bharat / city

ರಾಜ್ಯ ಆಯವ್ಯಯ ಮಂಡನೆಗೆ ಮುಹೂರ್ತ ಫಿಕ್ಸ್: ಮಾ. 4ರಿಂದ ಬಜೆಟ್ ಅಧಿವೇಶನ ಆರಂಭ

ಮಾರ್ಚ್ 4 ಮತ್ತು 5ರಂದು ಎರಡು ದಿನಗಳ ಕಾಲ 'ಒಂದು ದೇಶ ಒಂದು ಚುನಾವಣೆ ' ಬಗ್ಗೆ ಚರ್ಚೆಯಾಗಲಿದೆ. ಮಾರ್ಚ್ 8ರಂದು ಸೋಮವಾರ ಬಜೆಟ್ ಮಂಡನೆಯಾಗಲಿದ್ದು, ಮಾರ್ಚ್ ತಿಂಗಳ ಕೊನೆಯವರೆಗೂ ಬಜೆಟ್ ಅಧಿವೇಶನ ನಡೆಯುತ್ತದೆ ಎಂದು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

karnataka state governemtn  budget on March 8
ಸಚಿವ ಬಸವರಾಜ ಬೊಮ್ಮಾಯಿ
author img

By

Published : Feb 18, 2021, 9:52 PM IST

ಬೆಂಗಳೂರು: ಬಜೆಟ್ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಮಾರ್ಚ್ 4ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಮಾರ್ಚ್ 8ರಂದು ಬಜೆಟ್ ಮಂಡನೆಗೆ ದಿನಾಂಕ ನಿಗದಿಯಾಗಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.

ಸಚಿವ ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ 4 ಮತ್ತು 5ರಂದು ಎರಡು ದಿನಗಳ ಕಾಲ 'ಒಂದು ದೇಶ ಒಂದು ಚುನಾವಣೆ' ಬಗ್ಗೆ ಚರ್ಚೆಯಾಗಲಿದೆ. ಮಾರ್ಚ್ 8ರಂದು ಸೋಮವಾರ ಬಜೆಟ್ ಮಂಡನೆಯಾಗಲಿದ್ದು, ಮಾರ್ಚ್ ತಿಂಗಳ ಕೊನೆಯವರೆಗೂ ಬಜೆಟ್ ಅಧಿವೇಶನ ನಡೆಯುತ್ತದೆ ಎಂದು ಹೇಳಿದರು.

ಚಾಮರಾಜನಗರದಲ್ಲಿ ಕೃಷಿ ವಿಜ್ಞಾನ ಕಾಲೇಜು ಸ್ಥಾಪನೆಗೆ ಘಟನೋತ್ತರ ಅನುಮೋದನೆ, ಕರ್ನಾಟಕ ಠೇವಣಿ ಮತ್ತು ಹೂಡಿಕೆ (ತಿದ್ದುಪಡಿ) ವಿಧೇಯಕ 2020ಕ್ಕೆ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದರು.

ಕೋವಿಡ್-19 ಚಿಕಿತ್ಸೆ ವೆಚ್ಚ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆ 620 ಕೋಟಿ ರೂ., ಜನವರಿಯಿಂದ ಮಾರ್ಚ್ ಅಂತ್ಯದವರೆಗೆ 8 ಕೋಟಿ ರೂ. ಸೇರಿದಂತೆ ಒಟ್ಟು 700 ಕೋಟಿ ರೂ. ಸುವರ್ಣ ಆರೋಗ್ಯ ಸುರಕ್ಷಾ ಯೋಜನೆ ಅಡಿ ಪಾವತಿಗೆ ಅನುಮೋದನೆ, 8 ಮಕ್ಕಳ ಮತ್ತು ಮಾನಸಿಕ ಆಸ್ಪತ್ರೆಗಳು, 2 ಸಾಮಾನ್ಯ ಆಸ್ಪತ್ರೆಗಳ ಮೇಲ್ದರ್ಜೆಗೇರಿಸಲು ಒಪ್ಪಿಗೆ, ವಿಜಯಪುರ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸಲು 199 ಕೋಟಿ ರೂ. ಅನುಮೋದನೆ, ರಾಷ್ಟ್ರೀಯ ಹೆಲ್ತ್ ಮಿಷನ್ ಯೋಜನೆ ಅಡಿಯಲ್ಲಿ 22 ತಾಯಿ-ಮಕ್ಕಳ ಆಸ್ಪತ್ರೆಗೆ ಉಪಕರಣ ಖರೀದಿಗಾಗಿ 14.64 ಕೋಟಿ ರೂ. ರಾಜ್ಯದ ಪಾಲಿನ ಮೊತ್ತ ಬಿಡುಗಡೆಗೆ ಸಂಪುಟ ಅನುಮೋದನೆ ನೀಡಿದೆ ಎಂದು ಮಾಹಿತಿ ನೀಡಿದರು.

ರಾಜ್ಯ ಗೃಹ ಮಂಡಳಿಯ ಹೌಸಿಂಗ್ ಸ್ಕೀಂ 2010-11ರ 4 ಮತ್ತು 2011-12ರ 4 ಹೌಸಿಂಗ್ ಸ್ಕೀಂಗಳಿಗೆ ಯೋಜನೆ ಪರಿಷ್ಕರಣೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಮಂಡ್ಯ ಜಿಲ್ಲೆ ಅಯ್ಯನ ಕೆರೆ 19.03 ಕೋಟಿ ರೂ. ಮೊತ್ತದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಪೊಳಲಿಯ ಕರಿಯಂಗಳ ಗ್ರಾಮದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ 24.48 ಕೋಟಿ ರೂ. ಪರಿಷ್ಕೃತ ಯೋಜನೆಗೆ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದರು.

ಬೆಂಗಳೂರಿನ ವಸಂತ ನಗರದಲ್ಲಿ ಬಹುಮಹಡಿ ವಸತಿ ಕಟ್ಟಡ ನಿರ್ಮಾಣಕ್ಕೆ 117 ಕೋಟಿ ರೂ. ಯೋಜನೆಗೆ ಅನುಮೋದನೆ ನೀಡಿದ್ದು, ಹಾಲಿ ಇರುವ ವಸತಿ ಕಟ್ಟಡಗಳನ್ನು ನೆಲಸಮಗೊಳಿಸಿ ಕಟ್ಟಡ ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು.

ಬಾಗಲಕೋಟೆ, ಹುನುಗುಂದ ತಾಲೂಕಿನ ಅಮರಾವತಿ ಗ್ರಾಮದ ವಿದ್ಯಾವರ್ಧಕ ಸಂಘಕ್ಕೆ ನೀಡಲಾಗಿರುವ ಜಮೀನಿನ ಗುತ್ತಿಗೆ ನವೀಕರಣಕ್ಕೆ ಸಂಪುಟ ಒಪ್ಪಿಗೆ, ರಾಜ್ಯ ರಸ್ತೆ ಅಭಿವೃದ್ಧಿ ನಿಗಮಕ್ಕೆ 350 ಕೋಟಿ ರೂ. ನಿಧಿ ಸಂಗ್ರಹಕ್ಕೆ ರಾಜ್ಯ ಸರ್ಕಾರದ ಗ್ಯಾರಂಟಿ ನೀಡಲು ಅನುಮೋದನೆ, ಶಿವಮೊಗ್ಗ ಜಿಲ್ಲೆಯ ಮಾಚೇನಹಳ್ಳಿ ಗ್ರಾಮದ ಬಸವನೆಲೆ ಟ್ರಸ್ಟ್​​ಗೆ 3-04 ಎಕರೆ ಜಮೀನು ಮಂಜೂರಾತಿಗೆ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ಗ್ರಾಮ್ ಸಡಕ್ ಯೋಜನೆ -3 ಅಡಿಯಲ್ಲಿ 2204.39 ಕಿ.ಮೀ. ಹಾಗೂ 2649 ಮೀಟರ್ 75 ಕಿರು ಸೇತುವೆ ನಿರ್ಮಾಣಕ್ಕೆ 1848.95 ಕೋಟಿ ರೂ. ಯೋಜನೆಗೆ ಸಂಪುಟ ಅನುಮೋದನೆ ನೀಡಿದ್ದು, ಕೆ.ಆರ್. ಮಾರುಕಟ್ಟೆಯಿಂದ ಬೆಳ್ಳಂದೂರು ಕೆರೆವರೆಗೆ ಕೋರಮಂಗಲ ವ್ಯಾಲಿ ಪುನರುಜ್ಜೀವನ ಕೈಗೊಳ್ಳಲಾದ 169 ಕೋಟಿ ರೂ. ಯೋಜನೆಗೆ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.