ಬೆಂಗಳೂರು: ರಾಜ್ಯದ ವೈದ್ಯಕೀಯ ಶಿಕ್ಷಣದಲ್ಲಿ ಗಮನಾರ್ಹ ಸುಧಾರಣೆ ತರುವ ಉದ್ದೇಶದಿಂದ ಏಮ್ಸ್ ಸಂಸ್ಥೆ ಆರಂಭಿಸಬೇಕೆಂದು ಸಚಿವ ಡಾ.ಕೆ.ಸುಧಾಕರ್ ಅವರು ಕೇಂದ್ರ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದ್ದು ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಈ ಕುರಿತು ಸಚಿವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
-
ಇಂದು ಕೇಂದ್ರ ಆರೋಗ್ಯ ಸಚಿವರಾದ ಶ್ರೀ @mansukhmandviya ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ ನಂತರ ರಾಜ್ಯ ಆರೋಗ್ಯ ಇಲಾಖೆಯಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪನೆಯಾಗಿದೆ. ರಾಜ್ಯಕ್ಕೆ ಏಮ್ಸ್ ಮಂಜೂರು ಮಾಡಿದ್ದ ಮನವಿಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ.
— Dr Sudhakar K (@mla_sudhakar) May 18, 2022 " class="align-text-top noRightClick twitterSection" data="
1/3 pic.twitter.com/kC4KCg2FBg
">ಇಂದು ಕೇಂದ್ರ ಆರೋಗ್ಯ ಸಚಿವರಾದ ಶ್ರೀ @mansukhmandviya ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ ನಂತರ ರಾಜ್ಯ ಆರೋಗ್ಯ ಇಲಾಖೆಯಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪನೆಯಾಗಿದೆ. ರಾಜ್ಯಕ್ಕೆ ಏಮ್ಸ್ ಮಂಜೂರು ಮಾಡಿದ್ದ ಮನವಿಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ.
— Dr Sudhakar K (@mla_sudhakar) May 18, 2022
1/3 pic.twitter.com/kC4KCg2FBgಇಂದು ಕೇಂದ್ರ ಆರೋಗ್ಯ ಸಚಿವರಾದ ಶ್ರೀ @mansukhmandviya ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ ನಂತರ ರಾಜ್ಯ ಆರೋಗ್ಯ ಇಲಾಖೆಯಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪನೆಯಾಗಿದೆ. ರಾಜ್ಯಕ್ಕೆ ಏಮ್ಸ್ ಮಂಜೂರು ಮಾಡಿದ್ದ ಮನವಿಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ.
— Dr Sudhakar K (@mla_sudhakar) May 18, 2022
1/3 pic.twitter.com/kC4KCg2FBg
ನಿನ್ನೆ ಕೇಂದ್ರ ಆರೋಗ್ಯ ಸಚಿವ ಮಾನ್‌ಸುಖ್ ಮಾಂಡವೀಯರನ್ನು ದೇಹಲಿಯಲ್ಲಿ ಭೇಟಿ ಮಾಡಿದ ಸಚಿವ ಸುಧಾಕರ್ ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ ಈಗಾಗಲೇ ವೈದ್ಯಕೀಯ ಶಿಕ್ಷಣ ಕ್ಷೇತ್ರ ಸಾಕಷ್ಟು ಬೆಳೆದಿದೆ. ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ಮೆಡಿಕಲ್ ಕಾಲೇಜುಗಳಲ್ಲಿ ಶಿಕ್ಷಣ ಪಡೆದು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವೈದ್ಯರಾಗುವ ಕನಸು ಹೊತ್ತ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಕಲ್ಪಿಸಲು ಏಮ್ಸ್ ಸಂಸ್ಥೆ ಸ್ಥಾಪಿಸುವುದು ಸೂಕ್ತ ಎಂದು ಡಾ.ಕೆ.ಸುಧಾಕರ್, ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.
ಇದನ್ನೂ ಓದಿ: ರಾಯಚೂರಲ್ಲಿ ಏಮ್ಸ್ ಸ್ಥಾಪನೆಗೆ ಒತ್ತಾಯಿಸಿ ಮನವಿ
ಈ ಭೇಟಿ, ಚರ್ಚೆಯ ಬಳಿಕ ಟ್ವೀಟ್ ಮಾಡಿರುವ ಸಚಿವ ಸುಧಾಕರ್, ರಾಜ್ಯಕ್ಕೆ ಏಮ್ಸ್ ಮಂಜೂರು ಮಾಡುವಂತೆ ಮಾಡಿದ್ದ ಮನವಿಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಆರೋಗ್ಯ ಸಚಿವ ಮಾನ್‌ಸುಖ್ ಮಾಂಡವೀಯ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ಈ ಸಂಸ್ಥೆ ರಾಜ್ಯದಲ್ಲಿ ಸ್ಥಾಪನೆಯಾದರೆ ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ಮತ್ತಷ್ಟು ಮುಂಚೂಣಿಗೆ ಬರಲು ಹಾಗೂ ರಾಜ್ಯದ ಜನರಿಗೆ ವಿಶ್ವದರ್ಜೆಯ ಆರೋಗ್ಯ ಸೇವೆ ದೊರೆಯಲು ಸಹಾಯಕವಾಗಲಿದೆ ಎಂದು ತಿಳಿಸಿದ್ದಾರೆ.