ETV Bharat / city

ವ್ಯಾಪಕ ಮಳೆ; ಮಲೆನಾಡು ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ - ಕರ್ನಾಟಕ ಮಳೆ ಪ್ರವಾಣ ವರದಿ

ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಶುರುವಾಗಲಿದ್ದು, ಕರಾವಳಿ ಭಾಗದಲ್ಲಿ ರೆಡ್​​ ಅಲರ್ಟ್​​ ಘೋಷಣೆ ಮಾಡಲಾಗಿದೆ. ಅಲ್ಲದೆ ವಿವಿಧ ಜಿಲ್ಲೆಗಳಲ್ಲಿ ವರ್ಷಧಾರೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

karnataka-weather-report
ಹವಾಮಾನ ಇಲಾಖೆ
author img

By

Published : Aug 7, 2020, 5:20 PM IST

ಬೆಂಗಳೂರು: ಇಂದು ರಾಜ್ಯಾದ್ಯಂತ ವ್ಯಾಪಕ ಮಳೆಯಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಮಾನ್ಸೂನ್ ಚುರುಕಾಗಿದೆ. ಭಾಗಮಂಡಲದಲ್ಲಿ ಗರಿಷ್ಠ 40 ಸೆಂ.ಮೀ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ 36 ಸೆಂ.ಮೀ, ಮೂರ್ನಾಡು 22 ಸೆಂ.ಮೀ, ಮೂಡಿಗೆರೆಯಲ್ಲಿ 21 ಸೆಂ.ಮೀ, ಮಡಿಕೇರಿ 23 ಸೆಂ.ಮೀ, ಜಯಪುರ 20 ಸೆಂ.ಮೀ, ಹೊಸನಗರ ಹಾಗೂ ಆಗುಂಬೆಯಲ್ಲಿ 19 ಸೆಂ.ಮೀಟರ್ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಮಲೆನಾಡು ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್

ಮಲೆನಾಡು ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 7 ರಿಂದ 10 ರವರೆಗೆ ವ್ಯಾಪಕ ಮಳೆಯಾಗಲಿದ್ದು ಆಗಸ್ಟ್ 11 ರಂದು ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಬಹುದು‌. ಮಲೆನಾಡಿನ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಆಗಸ್ಟ್ 7 ರಂದು ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ನೀಡಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆಗಸ್ಟ್ ಎಂಟರಿಂದ ಹತ್ತರವರೆಗೆ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಕೊಡಲಾಗಿದೆ. ಮಲೆನಾಡಿನ ಜಿಲ್ಲೆಗಳಿಗೆ ಆಗಸ್ಟ್ 11 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ. ಕರಾವಳಿ ತೀರದಲ್ಲಿ ಗಾಳಿಯ ವೇಗ ಹೆಚ್ಚಿರುವ ಹಿನ್ನಲೆ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 7 ರಿಂದ 11 ರವರೆಗೆ ವ್ಯಾಪಕ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 7 ರಿಂದ 10 ರವರೆಗೆ ಭಾರೀ ಮಳೆ ನಿರೀಕ್ಷೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ.

ಆದರೆ ಆಗಸ್ಟ್ 11 ರಂದು ಎಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 7, 10, 11 ರಂದು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಆಗಸ್ಟ್ 8-9 ರಂದು ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.