ಬೆಂಗಳೂರು: ಬಂಗಾಳಕೊಲ್ಲಿ, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೋಮವಾರ ಹಾಗೂ ಮಂಗಳವಾರ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ದಕ್ಷಿಣ ಒಳನಾಡಿನ ಬೆಂಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ರಾಮನಗರ, ತುಮಕೂರು, ಬಳ್ಳಾರಿ, ಮಂಡ್ಯ ಜಿಲ್ಲೆಗಳ ಒಂದೆರಡು ಕಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ನಾಳೆ ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಯ ಒಂದೆರೆಡು ಕಡೆ ಮಳೆಯಾಗಲಿದ್ದು, ಉಳಿದೆಡೆ ಒಣ ಹವೆ ಇರಲಿದೆ. ಎರಡೂ ದಿನ ಕೊಡಗು ಮತ್ತು ಹಾಸನ ಜಿಲ್ಲೆಯ ಒಂದೆರಡು ಕಡೆ ಮಳೆಯಾಗಲಿದ್ದು ಉಳಿದಂತೆ ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಇರಲಿದೆ.
ಉತ್ತರ ಒಳನಾಡಿನಲ್ಲಿ ಸೋಮವಾರದಿಂದ ಮುಂದಿನ ನಾಲ್ಕು ದಿನವೂ ಒಣ ಹವೆ ಇರಲಿದೆ ಎಂದು ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ, ಉಡುಪಿಯ ಜಿಲ್ಲೆಯ ಒಂದೆರಡು ಕಡೆ ಮುಂದಿನ ನಾಲ್ಕು ದಿನಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಕನ್ನಡದಲ್ಲಿ ಒಣ ಹವೆ ಇರಲಿದೆ ಎಂದು ಇಲಾಖೆ ಹೇಳಿದೆ.
ಕಾರವಾರ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ:
ಕಾರವಾರ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ:
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಟ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: ಜವಾದ್ ಚಂಡಮಾರುತದ ಎಫೆಕ್ಟ್.. ಕರ್ನಾಟಕದಾದ್ಯಂತ ಡಿ.6ರವರೆಗೆ ಭಾರಿ ಮಳೆ..