ಕೃಷಿ ಮತ್ತು ಪೂರಕ ಚಟುವಟಿಕೆ
- ಪ್ರತಿ ಎಕರೆಗೆ 250 ರೂ.ನಂತೆ ರೈತರಿಗೆ ಡೀಸೆಲ್ ಸಹಾಯಧನ ನೀಡುವ ರೈತ ಶಕ್ತಿ ಯೋಜನೆಗೆ 500 ಕೋಟಿ ರೂ. ಅನುದಾನ
- ಗ್ರಾಮೀಣ ರೈತರಿಗೆ ಆರೋಗ್ಯ ಸೇವೆ ಒದಗಿಸಲು ಪರಿಷ್ಕೃತ ರೂಪದಲ್ಲಿ ಯಶಸ್ವಿನಿ ಯೋಜನೆ ಮರುಜಾರಿ, ರಾಜ್ಯ ಸರ್ಕಾರದಿಂದ 300 ಕೋಟಿ ರೂ. ಅನುದಾನ.
- ಬಳ್ಳಾರಿ ಜಿಲ್ಲೆಯ ಹಗರಿ ಹಾಗೂ ಬೆಳಗಾವಿ ಜಿಲ್ಲೆ, ಅಥಣಿಯಲ್ಲಿ ನೂತನ ಕೃಷಿ ಕಾಲೇಜು ಸ್ಥಾಪನೆ. ರೇಷ್ಮೆ ಬೆಳೆಗಾರರಿಗೆ ಪ್ರೋತ್ಸಾಹ
- 57 ತಾಲೂಕುಗಳ ವ್ಯಾಪ್ತಿಯಲ್ಲಿ 2.75 ಲಕ್ಷ ಹೆಕ್ಟೇರ್ ಮಳೆಯಾಶ್ರಿತ ಪ್ರದೇಶದಲ್ಲಿ ಕೇಂದ್ರದ ನೆರವಿನೊಂದಿಗೆ 642 ಕೋಟಿ ರೂ. ವೆಚ್ಚದಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಜಲಾನಯನ ಅಭಿವೃದ್ಧಿ ಘಟಕ 2.0 ಜಾರಿ
- ಯಲಹಂಕ ಬಳಿಯ ಜಾರಕಬಂಡೆ ಕಾವಲ್ ಪ್ರದೇಶದ 350 ಎಕರೆ ಸರ್ಕಾರಿ ಜಮೀನಲ್ಲಿ ಅಟಲ್ ಬಿಹಾರಿ ವಾಜಪೇಯಿ ಉದ್ಯಾನವನ ಅಭಿವೃದ್ಧಿ
- ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಲು ಎಸ್ಸಿ/ಎಸ್ಟಿ ಫಲಾನುಭವಿಗಳಿಗೆ ಶೇ.90 ಹಾಗೂ ಇತರೆ ವರ್ಗದ ರೈತರಿಗೆ ಶೇ.75 ಸಹಾಯಧನ
- ರಾಷ್ಟ್ರೀಯ ಖಾದ್ಯ ತೈಲಗಳು ತಾಳೆ ಎಣ್ಣೆ ಅಭಿಯಾನನದಡಿ ಐದು ವರ್ಷಗಳಲ್ಲಿ 25,000 ಹೆಕ್ಟೇರ್ ಹೆಚ್ಚಿಸುವ ಗುರಿ ಸಾಧಿಸಲು 35 ಕೋಟಿ ರೂ. ಅನುದಾನ
- ದ್ವಿತಳಿ ಬಿತ್ತನೆ ಗೂಡಿಗೆ ಪ್ರತಿ ಕೆಜಿಗೆ 50 ರೂ. ಪ್ರೋತ್ಸಾಹ ಧನ ಹೆಚ್ಚಳ
- ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಹಾಗೂ ಯಂತ್ರೋಪಕರಣಗಳನ್ನು ಅಳವಡಿಸಲು 25 ಕೋಟಿ ರೂ. ಅನುದಾನ
- ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಪ್ರತಿ ಟನ್ ದ್ವಿತಳಿ ರೇಷ್ಮೆ ಗೂಡಿಗೆ 10 ಸಾವಿರ ರೂ. ಪ್ರೋತ್ಸಾಹ ಧನ
- ಕಲಬುರಗಿ ಮತ್ತು ಹಾವೇರಿಯಲ್ಲಿ ನಬಾರ್ಡ್ ನೆರವಿನಿಂದ 30 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ
- ರೇಷ್ಮೆ ನೂಲು ಬಿಚ್ಚಣಿಕೆದಾರರು ಉತ್ಪಾದಿಸಿದ ಕಚ್ಚಾ ರೇಷ್ಮೆಗೂ ಪ್ರೋತ್ಸಾಹ ಧನ
- ಎಲ್ಲಾ ಜಿಲ್ಲೆಗಳಲ್ಲಿ ಮಿನಿ ಆಹಾರ ಪಾರ್ಕ್ ಸ್ಥಾಪನೆ