ಬೆಂಗಳೂರು: ಸುರೇಶ್ ಅಂಗಡಿ ಸಂಬಂಧಿ ಲಿಂಗರಾಜ ಪಾಟೀಲ್ ಅವರನ್ನು ಪಕ್ಷದ ಶಿಸ್ತು ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.
ಸುರೇಶ್ ಅಂಗಡಿ ಅವರ ಸೋದರ ಮಾವ, ರೈತ ಮುಖಂಡ ಲಿಂಗರಾಜ ಪಾಟೀಲ್ ಅವರನ್ನು ಮುಂದಿನ ಮೂರು ವರ್ಷದ ಅವಧಿಗೆ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಶಾಸಕ ಬಿ.ಸಿ ನಾಗೇಶ್, ಮುಖಂಡರಾದ ಪಿ.ಹೆಚ್.ಪೂಜಾರ, ರೀನಾ ಪ್ರಕಾಶ್, ಇ.ಅಶ್ವತ್ಥ ನಾರಾಯಣ್ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.