ಬೆಂಗಳೂರು: ಆರ್ಆರ್ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ರಂಗೇರುತ್ತಿದ್ದು, ದಕ್ಷಿಣ ಭಾರತದ ಖ್ಯಾತ ನಟಿ ಖುಷ್ಬೂ ಬಿಜೆಪಿ ಪರ ಪ್ರಚಾರಕ್ಕೆ ಆಗಮಿಸುವ ಮೂಲಕ ಚುನಾವಣಾ ಪ್ರಚಾರಕ್ಕೆ ತಾರಾ ಮೆರುಗು ಬರುತ್ತಿದೆ.
ಆರ್ಆರ್ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಸ್ವತಃ ಸಿನಿಮಾ ನಿರ್ಮಾಪಕರಾಗಿದ್ದು, ಚುನಾವಣಾ ಪ್ರಚಾರಕ್ಕೆ ತಾರಾ ಮೆರುಗು ತರುತ್ತಿದ್ದಾರೆ. ಇತ್ತೀಚಿಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ನಟಿ ಖುಷ್ಬೂ ಅವರನ್ನು ಪ್ರಚಾರಕ್ಕೆ ಕರೆತರುತ್ತಿದ್ದಾರೆ.
ಇಂದು ಸಂಜೆ 4 ಘಂಟೆಗೆ ನಟಿ ಖುಷ್ಬೂ ಕೆಂಪೇಗೌಡ ನಗರ ಆರ್ಚ್ ನಿಂದ ಲಗ್ಗೆರೆ ಕ್ವಾಟ್ರಸ್ ಮುಖಾಂತರ ರೋಡ್ ಶೋ ನಡೆಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಮತ ಯಾಚನೆ ಮಾಡಲಿದ್ದಾರೆ.