ETV Bharat / city

ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಆಟೋ ಡ್ರೈವರ್​ ಕೊಲೆ : ಆರೋಪಿಗಳ ಪತ್ತೆಗೆ ಪೊಲೀಸ್​ ತಲಾಷ್​​ - ಡಿಸಿಪಿ ಭೀಮಾಶಂಕರ್ ಗುಳೇದ್

ಮಂಗಳವಾರ ಬೆಳಗಿನ ಜಾವ ಸುಮಾರು 1.30ರ ಸುಮಾರಿನಲ್ಲಿ ಆಟೋದಿಂದ ಇಳಿದು ಮಂಜುನಾಥ್‌ ಓಡಿ ಹೋಗುತ್ತಿದ್ದಾಗ ಆರೋಪಿಗಳು ಅಟ್ಟಾಡಿಸಿಕೊಂಡು ಹೋಗಿದ್ದಾರೆ. ಕೋಡಿಹಳ್ಳಿ ಜಂಕ್ಷನ್ ಬಳಿ ಕೆಳಗೆ ಬಿದ್ದ ಮಂಜುನಾಥ್ ತಲೆಗೆ ಕಲ್ಲಿನಿಂದ ಹೊಡೆದು ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಆರೋಪಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದಿದ್ದಾರೆ..

DCP Bheemashankar
ಡಿಸಿಪಿ ಭೀಮಾಶಂಕರ್ ಗುಳೇದ್ ಸುದ್ದಿಗಾರರಿಗೆ ಮಾಹಿತಿ ನೀಡಿದರು.
author img

By

Published : Mar 15, 2022, 4:49 PM IST

ಬೆಂಗಳೂರು : ಆಟೋ ಚಾಲಕನನ್ನು ಅಟ್ಟಾಡಿಸಿ ಕಲ್ಲಿನಿಂದ ಹೊಡೆದು ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಜೆಬಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.

ಡಿಸಿಪಿ ಭೀಮಾಶಂಕರ್ ಗುಳೇದ್ ಸುದ್ದಿಗಾರರಿಗೆ ಮಾಹಿತಿ ನೀಡಿರುವುದು..

ದೂಪನಹಳ್ಳಿ ನಿವಾಸಿ ಮಂಜುನಾಥ್(32) ಎಂಬಾತ ಕೊಲೆಯಾದ ವ್ಯಕ್ತಿ. ಜೆಬಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಜಿಡಿ ಬಾರ್ ಬಳಿ ನಿನ್ನೆ ತಡರಾತ್ರಿ ಮಂಜುನಾಥ ಹಾಗೂ ಆರೋಪಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಪ್ರಾರಂಭವಾಗಿತ್ತು.

ಆ ಸಂದರ್ಭದಲ್ಲಿ ಮಂಜುನಾಥ ಬಾರ್‌ನಿಂದ ಹೊರಗೆ ಬಂದು ಆಟೋದೊಳಗೆ ಕುಳಿತುಕೊಂಡಿದ್ದಾಗ ಆರೋಪಿಗಳು ಮತ್ತೆ ಅಲ್ಲಿಗೂ ಬಂದು ಗಲಾಟೆ ಮಾಡಿದ್ದರು ಎಂದು ಪ್ರಕರಣದ ಕುರಿತು ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ.

ಮಂಗಳವಾರ ಬೆಳಗಿನ ಜಾವ ಸುಮಾರು 1.30ರ ಸುಮಾರಿನಲ್ಲಿ ಆಟೋದಿಂದ ಇಳಿದು ಮಂಜುನಾಥ್‌ ಓಡಿ ಹೋಗುತ್ತಿದ್ದಾಗ ಆರೋಪಿಗಳು ಅಟ್ಟಾಡಿಸಿಕೊಂಡು ಹೋಗಿದ್ದಾರೆ. ಕೋಡಿಹಳ್ಳಿ ಜಂಕ್ಷನ್ ಬಳಿ ಕೆಳಗೆ ಬಿದ್ದ ಮಂಜುನಾಥ್ ತಲೆಗೆ ಕಲ್ಲಿನಿಂದ ಹೊಡೆದು ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಆರೋಪಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದಿದ್ದಾರೆ.

ಆರೋಪಿಗಳಿಗಾಗಿ ಶೋಧ : ಸುದ್ದಿ ತಿಳಿದ ತಕ್ಷಣ ಜೆಬಿನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ. ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ಡಿಸಿಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.